Recent Posts

ವೈದ್ಯರ ಎಡವಟ್ಟು- ಕೂದಲು ಶಸ್ತ್ರ ಚಿಕಿತ್ಸೆಗೆ ಹೋದ ವ್ಯಕ್ತಿ ಸಾವು

ನವದೆಹಲಿ: ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ  ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ದೆಹಲಿಯ  ವ್ಯಕ್ತಿ ಅಥರ್ ರಶೀದ್ (30) ಕೂದಲ ಕಸಿ ಮಾಡಿಸಿಕೊಳ್ಳಲು ಕ್ಲಿನಿಕ್‌ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ. ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ …

Read More »

ಉಡುಪಿ: ಯುವತಿ ನಾಪತ್ತೆ

ಉಡುಪಿ: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ಬಡಗುಬೆಟ್ಟುವಿನ ಇಂದಿರಾನಗರದಲ್ಲಿರುವ ಅಜ್ಜಿ ಮನೆಯಿಂದ ನ.28ರಂದು ಹೋದ ನಿಖಿತಾ(19) ಎಂಬಾಕೆ ಈವರೆಗೆ ವಾಪಾಸ್‌ ಬಾರದೆ ನಾಪತ್ತೆಯಾಗಿದ್ದಾರೆ. ಸಪೂರ ಶರೀರ, ಗೋದಿ ಮೈಬಣ್ಣ ಹೊಂದಿರುವ ಈಕೆ, ಪಿಂಕ್ ಚೂಡಿ ದಾರದ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಇವರು ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೊಸ ದರ ಇಂದಿನಿಂದಲೇ ಜಾರಿ ಸಾಧ್ಯತೆ

ಉಡುಪಿ: ಜನರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೇ ಹೆಜಮಾಡಿ ಟೋಲ್‌ನಲ್ಲಿ ವಾಹನಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮುಂದಾಗಿರುವುದು ಜನಾಕ್ರೋಶಕ್ಕೆ ಕಾರಣ ವಾಗಿದೆ. ಸಾರ್ವಜನಿಕರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಜಿಲ್ಲೆಯ ಶಾಸಕರು, ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೂ ಸುರತ್ಕಲ್‌ ಟೋಲ್‌ನ ದರವನ್ನು ಹೆಜಮಾಡಿಯಲ್ಲಿ ಸಂಗ್ರಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಇದಾವುದಕ್ಕೂ ಟೋಲ್‌ ಗುತ್ತಿಗೆಯ ಕಂಪೆನಿಯಾಗಲೀ ಅಥವಾ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾಗಲೀ ಬೆಲೆಯೇ ಕೊಡದಿರುವುದೂ ಜನಾಕ್ರೋಶವನ್ನು ಹೆಚ್ಚಿಸಿದೆ. ಹೆಜಮಾಡಿ ಟೋಲ್‌ ದರ ಪರಿಷ್ಕರಣೆ ವಿಷಯವಾಗಿ ಡಿ. 5ರಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಸಚಿವ ನಿತಿನ್‌ …

Read More »

You cannot copy content of this page.