Recent Posts

ಮಂಗಳೂರು :ಜಿಲ್ಲಾಡಳಿತ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿದ ಅಕ್ರಮ ಮರಳು ದಂಧೆಕೋರರು

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ. ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಮತ್ತೆ ನಸುಕಿನ …

Read More »

ಕಾರ್ಕಳ: ಮನನೊಂದು ಮೆಸ್ಕಾಂ ಉದ್ಯೋಗಿ ಆತ್ಮಹತ್ಯೆ..!

ಕಾರ್ಕಳ: ಅಣ್ಣನ ಸಾವಿನಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾದ ಕೇಪುಲ ಎಂಬಲ್ಲಿ ಸಂಭವಿಸಿದೆ. ನಿಶಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಶಾ, ಮನೆ ಸಮೀಪದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ನಿಶಾ ಅಣ್ಣ ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಿಶಾ, ನಿಟ್ಟೆಯ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಅವರಿಗೆ ರಾಷ್ಟ್ರಪತಿ ಪದಕ ಪ್ರದಾನ

ಉಡುಪಿ: ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ 2021ನೇ ಸಾನಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ವನ್ನು ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವೀಕರಿಸಿದರು. 1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಇವರು, 30ವರ್ಷ ಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ …

Read More »

You cannot copy content of this page.