Recent Posts

ಮಂಗಳೂರಿನಲ್ಲಿ ಕ್ಯಾಪ್ಟನ್‌ ಕೂಲ್‌ ಎಂ ಎಸ್ ಧೋನಿ..!

ಮಂಗಳೂರು : ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಅತ್ಯಂತ ಯಶಸ್ವಿ ಕ್ಯಾಪ್ಟನ್‌ ಮಹೇಂದ್ರ ಸಿಂಗ್ ಧೋನಿ ಇಂದು, ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಬಂದಿಳಿದಿದ್ದಾರೆ. ಕ್ಯಾಪ್ಟನ್ ಕೂಲ್‌ ಖ್ಯಾತಿಯ ಧೋನಿ, ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ, ಐಪಿಎಲ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಧೋನಿ, ಇದೀಗ ತಮ್ಮ ಸ್ನೇಹಿತ ಕಾಸರಗೋಡಿನ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ ಕೆ.ಕೆ. ಅಬ್ದುಲ್‌ ಗಫಾರ್ ಅವರ …

Read More »

ಉಡುಪಿ: ಕಾಂತರ ಸಿನಿಮಾ ಶೈಲಿಯಲ್ಲಿ ಕೋರ್ಟ್‍ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವು

ಉಡುಪಿ: ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿಯಲ್ಲಿ ಕಾಂತಾರ ಸಿನಿಮಾದಲ್ಲಿ ನಡೆದಿರುವ ಘಟನೆ ನಡೆದಿದೆ. ಹೌದು, 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದಲ್ಲಿ ಎರಡು ಗುಂಪುಗಳನ್ನು ರಚನೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ವೇಳೇ, ಭಕ್ತ ಸಮಿತಿ ಮತ್ತು ಟ್ರಸ್ಟ್ ಕೋರ್ಟ್ ಮೆಟ್ಟಿಲೇರಿದೆ. ಟ್ರಸ್ಟಿ ಜಯ ಪೂಜಾರಿ ಕೋರ್ಟ್ ಮೆಟ್ಟಿಲೇರಿದ ಮರುದಿನವೇ ಸಾವನ್ನಪ್ಪಿರುವುದು ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅವರ ಸಾವಿನ ಹಿನ್ನಲೆಯಲ್ಲಿ, ವಾರ್ಷಿಕ ನೇಮೋತ್ಸವವನ್ನು ಮುಂದೂಡಲಾಗಿದೆಯಂತೆ. ಕಾಂತರ ಸಿನಿಮಾ ಶೈಲಿಯಲ್ಲಿ ಕೋರ್ಟ್‍ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವಪ್ಪಿರುವ ಹಿನ್ನಲೆಯಲ್ಲಿ ಸ್ಥಳೀಯ ಜನತೆ ನಾನಾ ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

Read More »

ಕಾಸರಗೋಡು: ಆನ್ ಲೈನ್ ನಲ್ಲಿ ತರಿಸಿದ ಆಹಾರ ಸೇವಿಸಿ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ವಿಷಾಹಾರ ಸೇವನೆಯಿಂದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ . ಹೋಟೆಲ್ ನಿಂದ ತರಿಸಿದ್ದ ಆಹಾರ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಈಕೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು …

Read More »

You cannot copy content of this page.