Recent Posts

ಅನಾರೋಗ್ಯದಲ್ಲಿರುವ ಲಾಲುಗೆ ಮೂತ್ರಪಿಂಡ ದಾನ ಮಾಡಲಿದ್ದಾರೆ ಸಿಂಗಪುರದಲ್ಲಿರುವ ಮಗಳು ರೋಶಿನಿ

ನವದೆಹಲಿ: ಅನಾರೋಗ್ಯಕ್ಕೆ ಒಳಗಾಗಿರುವ ರಾಷ್ಟ್ರೀಯ ಜನತಾ ದಳದ(ಆರ್‌ಜೆಡಿ) ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಂಗಪುರದಲ್ಲಿರುವ ಮಗಳು ರೋಶಿನಿ ಯಾದವ್ ಕಿಡ್ನಿ ದಾನ ಮಾಡಲಿದ್ದಾರೆ ಎಂದು ಅವರ ಕುಟುಂಬದ ಆಪ್ತರು ತಿಳಿಸಿದ್ದಾರೆ. ಸಿಂಗಪುರದಲ್ಲಿ ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದ 74 ವರ್ಷದ ಲಾಲು, ಕಳೆದ ತಿಂಗಳು ಸ್ವದೇಶಕ್ಕೆ ವಾಪಸ್ ಆಗಿದ್ದರು. ಆರೋಗ್ಯದ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಆರ್‌ಜೆಡಿ ಅಧ್ಯಕ್ಷರಿಗೆ ಕಿಡ್ನಿ ಕಸಿ ಮಾಡಿಸಿಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಂಗಪುರದಲ್ಲಿರುವ ಅವರ ಮಗಳು ರೋಶಿನಿ ಯಾದವ್, ತಮ್ಮ ತಂದೆಗಾಗಿ ಮೂತ್ರಪಿಂಡ ನೀಡಲು ಮುಂದೆ ಬಂದಿದ್ದಾರೆ …

Read More »

ಖಾಸಗಿ ಬಸ್ ನಲ್ಲಿ ಮಹಿಳೆ ಎದುರು ಪ್ಯಾಂಟ್ ಜೀಪ್ ಜಾರಿಸಿದ ಬಸ್ ಕ್ಲೀನರ್; ಆರೋಪಿಯ ಬಂಧನ

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. …

Read More »

ಕರಾವಳಿಗರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಈ ಜಿಲ್ಲೆಗಳಲ್ಲಿ ಶೀಘ್ರವೇ `ಕುಚಲಕ್ಕಿ’ ವಿತರಣೆ

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗಿದ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚಲಕ್ಕಿ ವಿತರಣೆ ಮಾಡಲಾಗುವುದು. ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಿಸಲು ಖರೀದಿಸುವ ಪ್ರತಿ ಕ್ವಿಂಟಲ್ ಕುಚಲಕ್ಕಿ ಭತ್ತಕ್ಕೆ 500 ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದ್ದಾರೆ. …

Read More »

You cannot copy content of this page.