Recent Posts

ಪಂಪ್ ವೆಲ್ ನಲ್ಲಿ ನೋಟಿನ ಬಂಡಲ್ ಪತ್ತೆ ಪ್ರಕರಣ;ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು: ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ …

Read More »

ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗಲೇ ಕುಸಿದು ಬಿದ್ದು ತಂದೆ ಮೃತ್ಯು

ಉತ್ತರಖಂಡ್: ಸಂಭ್ರಮದಲ್ಲಿರುವಾಗಲೇ ಹಠಾತ್‌ ಹೃದಯಾಘಾತಗಳು ಸಂಭವಿಸಿ ಕುಸಿದು ಬಿದ್ದು ಮೃತಪಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಇಂಥದ್ದೇ ಮತ್ತೊಂದು ಘಟನೆ ಉತ್ತರಾಖಂಡ್‌ ನ ಅಲ್ಮೋರಾದಲ್ಲಿ ಭಾನುವಾರ (ಡಿ.11 ರಂದು) ನಡೆದಿದೆ. ತನ್ನ ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ವಧುವಿನ ತಂದೆ ಸಂತಸದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಗಾಬರಿಗೊಂಡು ಕುಟುಂಬಸ್ಥರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ವೈದ್ಯರು ಹೇಳಿದ್ದಾರೆ. ಕೆಲವು ಕುಟುಂಬಸ್ಥರು ಮದುವೆ ನಡೆಯಲಿದ್ದ ಹಲ್ದ್ವಾನಿ ಪ್ರದೇಶಕ್ಕೆ ತೆರಳಿದ ಬಳಿಕ ಈ ಘಟನೆ ನಡೆದಿದೆ. …

Read More »

ರಾಜ್ಯದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆ..! ಸೋಂಕಿನ ಲಕ್ಷಣಗಳೇನು?

ರಾಜ್ಯದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಇದರಿಂದ ಕರ್ನಾಟಕದ ಜನತೆ ಆತಂಕಕ್ಕೀಡಾಗಿತ್ತು. ರಾಯಚೂರಿನಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ. 5 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ.ರಾಯಚೂರಿನ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್‌ ಬಂದಿದೆ. ಝೀಕಾ ವೈರಸ್‌ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ. ಸೊಳ್ಳೆ ಕಡಿತದಿಂದ ಬರುವ ಝಿಕಾ …

Read More »

You cannot copy content of this page.