Recent Posts

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ

ಉಜಿರೆ: ಇಲ್ಲಿಯ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.ಪೆರ್ಲದಲ್ಲಿ ಕಳೆದ ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ  ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ …

Read More »

ಒಂದೇ ಕುಟುಂಬದ ಇಬ್ಬರು ಮಕ್ಕಳ ಕಿಡ್ನಿ ವೈಫಲ್ಯ : ದಾನಿಗಳ ನೆರವಿಗಾಗಿ ಮನವಿ

ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಏತಡ್ಕ ವಳಕುಂಜದಲ್ಲಿ ವಾಸವಾಗಿರುವ ಜನಾರ್ಧನ ಎಂಬವರ ಇಬ್ಬರು ಮಕ್ಕಳು ನೂರಾರು ಕನಸುಗಳನ್ನು ಹೊತ್ತುಕೊಂಡು ತನ್ನ ಭವಿಷ್ಯವನ್ನು ರೂಪಿಸಿಕೊಳ್ಳುವ ವಯಸ್ಸಿನಲ್ಲೇ ತನ್ನ ಎರಡೂ ಕಿಡ್ನಿ ವೈಫಲ್ಯಕ್ಕೊಳಗಾಗಿ ಖರ್ಚು ವೆಚ್ಚಕ್ಕೆ ಯಾವುದೇ ದಾರಿ ಇಲ್ಲದೆ ಚಿಕಿತ್ಸೆಗೆ ಹಾಗೂ ಸಂಬಂಧಿತ ಖರ್ಚು ವೆಚ್ಚಕ್ಕೆ ಉದಾರ ದಾನಿಗಳಿಂದ ಕುಟುಂಬ ನೆರವು ಯಾಚಿಸಿದೆ.ಕಳೆದ ಹಲವಾರು ವರ್ಷಗಳಿಂದ ಬೀಡಿ ಕಾರ್ಮಿಕನಾಗಿ ದುಡಿಯುತ್ತಿರುವ ಜನಾರ್ಧನವರು ಬೆವರು ಸುರಿಸಿ ಸಂಪಾದಿಸಿದ ಹಣದಿಂದ ತನ್ನ ಮಕ್ಕಳ ಉತ್ತಮವಾದ ಭವಿಷ್ಯವನ್ನು ನೋಡಬೇಕೆಂಬ ಕನಸನ್ನು ಹೊತ್ತುಕೊಂಡು ಜೀವನದ ಮೆಟ್ಟಲನ್ನು …

Read More »

ಮದ್ಯ ಕುಡಿದು ಸತ್ತವರಿಗೆ ಯಾವುದೇ ಪರಿಹಾರ ಕೊಡಲ್ಲ; ಸಿಎಂ

ಮದ್ಯ ಕುಡಿದು ಸತ್ತವರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಹಾರದ ಸರನ್ ಜಿಲ್ಲೆಯಲ್ಲಿ ಕಳ್ಳ ಬಟ್ಟಿ ಸೇವಿಸಿ ಸಾವನ್ನಪ್ಪಿದ ಘಟನೆಯನ್ನ ಉಲ್ಲೇಖಿಸಿದರು.ನಾವು ಮನವಿ ಮಾಡುತ್ತಲೇ ಇದ್ದೇವೆ, ಕುಡಿತವು ನಿಮಗೆ ಒಳ್ಳೆಯದನ್ನ ತಂದುಕೊಡಲ್ಲ. ಆದರೂ ಕುಡಿದು ಸಾಯುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ವೇಳೆ ಪ್ರತಿಪಕ್ಷ ನಾಯಕ ವಿಜಯ್ ಸಿನ್ಹಾ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಆದ್ರೆ ನಿತೀಶ್, ‘ಮದ್ಯ ಸೇವಿಸಿ ಮೃತಪಟ್ಟಿದ್ದರೆ ಸರ್ಕಾರ ಪರಿಹಾರ ನೀಡಲು ಸಾಧ್ಯವೇ …

Read More »

You cannot copy content of this page.