Recent Posts

ಮಂಗಳೂರು: ಹಿಂದೂ ಮಹಾಸಭಾದ ರಾಜೇಶ್ ಪವಿತ್ರನ್ ಅರೆಸ್ಟ್..!

ಮಂಗಳೂರು: ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್‌ ಪವಿತ್ರನ್‌ ಎಂಬುವರನ್ನು ಸುರತ್ಕಲ್‌ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್‍ನಲ್ಲಿ ರಾಜೇಶ್ ಪವಿತ್ರನ್ ಜೊತೆ ಪಾಲುದಾರಿಕೆಯಲ್ಲಿ ಸ್ಯಾಫ್ರಾನ್ ಇಂಟರ್ ನ್ಯಾಷನಲ್ ಟ್ರೇಡಿಂಗ್ ಎಂಬ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್ ಪವಿತ್ರನ್ ಅವ್ಯವಹಾರಗಳು ಗಮನಕ್ಕೆ ಬಂದುದರಿಂದ ಪಾಲುದಾರಿಕೆಯಿಂದ ಹೊರಬರಲು ನಿರ್ಧರಿಸಿದ್ದರು. ಇದರಿಂದ …

Read More »

ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ಸಾವು

ಕಾರವಾರ: ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ (65) ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ ರನ್ನು ಶಿರಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.   ಯಕ್ಷಗಾನ ಹಾಗೂ ಹಲವು ರಾಗಗಳಲ್ಲಿ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಸಾಕಷ್ಟು ಹೆಸರು ಮಾಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದು, ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬಂಟ್ವಾಳ: ಶಾಲಾ ಮಕ್ಕಳ ಕಿಡ್ನಾಪ್ ಯತ್ನ: ಪೋಷಕರಲ್ಲಿ ಆತಂಕ

ಬಂಟ್ವಾಳ: ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ. ಘಟನೆಯ …

Read More »

You cannot copy content of this page.