Recent Posts

ಉಡುಪಿ :ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವು ಡಿಸೆಂಬರ್ 14 ಮತ್ತು 15 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಡಿ. 14 ರಂದು ಬೆಳಗ್ಗೆ 9 ಘಂಟೆಗೆ ಕ್ರೀಡಾಕೂಟ ಆರಂಭವಾಗಲಿದ್ದು, ನೌಕರರಿಗೆ ಅಥ್ಲೆಟಿಕ್ಸ್, ಗುಂಪು ಸ್ಪರ್ಧೆ, ಸಾಂಸ್ಕೃತಿಕ ಹಾಗೂ ಇತ್ಯಾದಿ ಕ್ರೀಡೆಗಳು ನಡೆಯಲಿದ್ದು, ಒಂದು ಸ್ಪರ್ಧೆಯಲ್ಲಿ ಐದಕ್ಕಿಂತ ಕಡಿಮೆ ಸ್ಪರ್ಧಾಳುಗಳಿದ್ದಲ್ಲಿ ಅಂತಹ ಸ್ಪರ್ಧೆಗೆ ರಾಜ್ಯ ಮಟ್ಟಕ್ಕೆ ನೇರವಾಗಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು …

Read More »

ಪಂಪ್ ವೆಲ್ ನಲ್ಲಿ ನೋಟಿನ ಬಂಡಲ್ ಪತ್ತೆ ಪ್ರಕರಣ;ವಾರಸುದಾರ ಪೊಲೀಸ್ ಠಾಣೆಗೆ ಹಾಜರ್

ಮಂಗಳೂರು: ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್‌ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ …

Read More »

ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗಲೇ ಕುಸಿದು ಬಿದ್ದು ತಂದೆ ಮೃತ್ಯು

ಉತ್ತರಖಂಡ್: ಸಂಭ್ರಮದಲ್ಲಿರುವಾಗಲೇ ಹಠಾತ್‌ ಹೃದಯಾಘಾತಗಳು ಸಂಭವಿಸಿ ಕುಸಿದು ಬಿದ್ದು ಮೃತಪಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಇಂಥದ್ದೇ ಮತ್ತೊಂದು ಘಟನೆ ಉತ್ತರಾಖಂಡ್‌ ನ ಅಲ್ಮೋರಾದಲ್ಲಿ ಭಾನುವಾರ (ಡಿ.11 ರಂದು) ನಡೆದಿದೆ. ತನ್ನ ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ವಧುವಿನ ತಂದೆ ಸಂತಸದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಗಾಬರಿಗೊಂಡು ಕುಟುಂಬಸ್ಥರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ವೈದ್ಯರು ಹೇಳಿದ್ದಾರೆ. ಕೆಲವು ಕುಟುಂಬಸ್ಥರು ಮದುವೆ ನಡೆಯಲಿದ್ದ ಹಲ್ದ್ವಾನಿ ಪ್ರದೇಶಕ್ಕೆ ತೆರಳಿದ ಬಳಿಕ ಈ ಘಟನೆ ನಡೆದಿದೆ. …

Read More »

You cannot copy content of this page.