Recent Posts

ಪಡುಬಿದ್ರಿ: ಮೀನುಗಾರಿಕಾ ದೋಣಿ ಮುಳುಗಡೆ

ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದೆ. ಇಂದು ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆಂದು ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿತ್ತು. ಈ ವೇಳೆ ದೋಣಿಯಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು, ದೋಣಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲೀಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ …

Read More »

ಕಾಂತಾರ-2’ ಚಿತ್ರಕ್ಕೆ ದೈವ ಒಪ್ಪಿಗೆ.. ಕೋಲದಲ್ಲಿ ದೈವ ನೀಡಿದ ಷರತ್ತು ಏನು ಗೊತ್ತಾ..?

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರವು ಇಡೀ ವಿಶ್ವವೇ ಮೆಚ್ಚಿಕೊಂಡು ರೆಕಾರ್ಡ್ ಮಾಡ್ತಾನೆ ಇದೆ. ತುಳುನಾಡಿನ ದೈವಾರಾಧನೆಯನ್ನ ಪಸರಿಸಿದ ನಮ್ಮ ಹೆಮ್ಮೆಯ ಸಿನಿಮಾ ಕಾಂತಾರ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ತೆರೆಕಂಡಿರುವ ಕಾಂತಾರ, ಸಿನಿಮಾ ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕ ಬಾಕ್ಸ್ ಆಫೀಸ್ನಲ್ಲಿ ಅತಿ ಹೆಚ್ಚು ಕಲೆಕ್ಷನ್ ಕೂಡ ಮಾಡ್ತಿದೆ. ಮತ್ತೆ ಕಾಂತಾರ ಪ್ರೇಕ್ಷಕರಿಗೆ ಶುಭ ಸುದ್ದಿಯೊಂದು ಹೊರಬಂದಿದೆ. ಕಾಂತಾರ ಭಾಗ-2 ಚಿತ್ರಕ್ಕೆ ಅಣ್ಣಪ್ಪ ಪಂಜುರ್ಲಿ ದೈವದ ಬಳಿ ಚಿತ್ರತಂಡ ಅನುಮತಿ ಕೇಳಿತ್ತು. ಮಂಗಳೂರಿನ ಬಂದಲೆಯಲ್ಲಿ …

Read More »

ಬೆಳ್ತಂಗಡಿಯಲ್ಲಿ ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಮಂಗಳೂರು: ಜಿಲ್ಲೆಯ ಬೆಳ್ತಂಗಡಿಯ ಅಣಿಯೂರು ನದಿಯ ಸೇತುವೆಯ ಕೆಳಭಾಗದಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಹೀಗಾಗಿ ನದಿಯ ಸೇತುವೆಯ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಅಲ್ಲದೇ ಆನೆಯ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ‌. ಚಾರ್ಮಾಡಿ, ನೆರಿಯ ಸೇರಿದಂತೆ ತಾಲೂಕಿನ ಹಲವೆಡೆ ಆನೆಗಳು ಕೃಷಿ ತೋಟಕ್ಕೆ ನುಗ್ಗಿ ಹಾನಿ ಮಾಡುತ್ತಿವೆ. ಈ ನಡುವೆ ಪೇಟೆಯಲ್ಲಿ ಆನೆ ಕಂಡುಬಂದಿದ್ದು, ಮತ್ತಷ್ಟು ಭಯವುಂಟು ಮಾಡಿದೆ. ತಕ್ಷಣ ಅರಣ್ಯ ಇಲಾಖೆ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಕೂಡಲೇ ಅರಣ್ಯಾಧಿಕಾರಿ ಕಾಡಾನೆ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

Read More »

You cannot copy content of this page.