Recent Posts

SHOCKING NEWS: ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಹತ್ತು ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರ ಎಸೆದು, ಆಕೆಯ ತಾಯಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಏನಿದು ಘಟನೆ? ಮಹಿಳೆ ಮತ್ತು ಆಕೆಯ ಹತ್ತು ತಿಂಗಳ ಮಗಳು ಪೆಲ್ಹಾರ್‌ನಿಂದ ವಾಡಾ ತಹಸಿಲ್‌ನ ಪೊಶೆರೆಗೆ ಕ್ಯಾಬ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಕ್ಯಾಬ್ ಚಾಲಕ ಮತ್ತು ಕೆಲವು ಸಹ ಪ್ರಯಾಣಿಕರು ಮಹಿಳೆಗೆ ಕಿರುಕುಳ ನೀಡಲಾರಂಭಿಸಿದ್ದಾರೆ. ಇದನ್ನು ಮಹಿಳೆ ವಿರೋಧಿಸಿದಾಗ, ಸಹ ಪ್ರಯಾಣಿಕರು ಮಗುವನ್ನು ಕ್ಯಾಬ್‌ನಿಂದ ಹೊರ ಎಸೆದು ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆದ್ರೆ, ವೇಗವಾಗಿ …

Read More »

ಘೋರ ದುರಂತ : ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು 10 ತಿಂಗಳ ಮಗು ಸಾವು!

 ದಾವಣಗೆರೆ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರು ತುಂಬಿದ ಬಕೆಟ್ ಗೆ ಬಿದ್ದು 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಿಸ್ತುವಳ್ಳಿ ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ 10 ತಿಂಗಳ ಮಗಳು ಅನುಶ್ರಾವ್ಯ ಮೃತಪಟ್ಟಿದ್ದು, ಆಟವಾಡುತ್ತಿದ್ದ ವೇಳೆ ನೀರು ತುಂಬಿದ ಬಕೆಟ್ ಗೆ ಬಿದ್ದು ಅನುಶ್ರಾವ್ಯ ಸಾವನ್ನಪ್ಪಿದ್ದಾಳೆ. ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಮಗು ಸಾವನ್ನಪ್ಪಿದೆ.

Read More »

ಲಾರಿ-ಕಾರು ಮುಖಾಮುಖಿ ಡಿಕ್ಕಿ, ಮೂವರು ಸಾವು: ಓರ್ವ ಗಂಭೀರ

ಶಿವಮೊಗ್ಗ: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

Read More »

You cannot copy content of this page.