Recent Posts

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಅನಾರೋಗ್ಯ- ಆಸ್ಪತ್ರೆಗೆ ದಾಖಲು

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅನಾರೋಗ್ಯ ಕಾಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಸಚಿವರೇ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು ಫೋನ್ ಮೂಲಕ ಸಂಪರ್ಕಿಸಬಹುದು ಎಂಸು ತಿಳಿಸಿದ್ದಾರೆ. “ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ-ಕೋಟ”

Read More »

BIGG NEWS : ಸುಬ್ರಹ್ಮಣ್ಯದಲ್ಲಿ ಘೋರ ದುರಂತ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಧರ್ಮಪಾಲ (46) ಹಾಗೂ ಚೊಕ್ಕಾಡಿಯ ಬೆಳ್ಳಪ್ಪ (49) ಎಂದು ಗುರುತಿಸಲಾಗಿದೆ. ಹೊಳೆಯಲ್ಲಿದ್ದ ಪಂಪಿನ ಪೂಟ್ ವಾಲ್ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆಂದು ಶಂಕಿಸಲಾಗಿದ್ದು, ಸದ್ಯ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 …

Read More »

You cannot copy content of this page.