Recent Posts

ಉಡುಪಿ ಜಿಲ್ಲೆಯಾದ್ಯಂತ ಜಾನುವರು ಸಾಗಾಟ 1 ತಿಂಗಳು ನಿಷೇಧ- ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳ (ದನ ಮತ್ತು ಎಮ್ಮೆ) ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಇದು ವೈರಸ್ ಕಾಯಿಲೆಯಾಗಿದ್ದು, ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುಗಳಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಮತ್ತು ಈ ರೋಗದಿಂದ ಜಾನುವಾರು ಮಾಲೀಕರಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More »

ಉಡುಪಿ: ಆನ್ಲೈನ್ ಕಂಪೆನಿಗಳಿಂದ ಗ್ರಾಹಕರಿಗೆ, ವ್ಯಾಪಾರಿಗಳಿಗೆ ವಂಚನೆ

ಉಡುಪಿ: ಆನ್ಲೈನ್ ಕಂಪೆನಿಗಳು ಆಫರ್ ಹೆಸರಿನಲ್ಲಿ ಗ್ರಾಹಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಮೋಸ ಮಾಡುತ್ತಿವೆ. ಆನ್ಲೈನ್ ಕಂಪೆನಿಗಳಿಂದ ಸ್ಥಳೀಯ ಅಂಗಡಿಯವರಿಗೂ ನಷ್ಟವಾಗುತ್ತಿದೆ ಎಂದು ಎಂದು ಉಡುಪಿ, ದಕ್ಷಿಣ ಕನ್ನಡ ಮೊಬೈಲ್ ರೀಟೇಲರ್ ಅಸೋಸಿಯೇಶನ್ ನ ಜಿಲ್ಲಾ ಕಾರ್ಯದರ್ಶಿ ವಿವೇಕ್  ಸುವರ್ಣ ಆರೋಪಿಸಿದ್ದಾರೆ. ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಮಾರ್ಕೆಟಿಂಗ್ ಜಾಹೀರಾತುಗಳನ್ನು ಆನ್ಲೈನ್ನಲ್ಲೇ ಪ್ರಕಟಿಸಿ ಯಾವುದೇ ವಿಶೇಷ ರಿಯಾಯತಿಯನ್ನು ಗ್ರಾಹಕರಿಗೆ ನೀಡುತ್ತಿಲ್ಲ. ಆದರೆ ಸ್ಥಳೀಯ ಅಂಗಡಿಗಳಲ್ಲಿ ಉತ್ತಮ ಆಫರ್ ಜತೆಗೆ ಕಡಿಮೆ ಬೆಲೆಯಲ್ಲಿ ಇದೇ ಮೊಬೈಲ್ಗಳು ಲಭ್ಯವಾಗುತ್ತಿವೆ. ಆದರೆ …

Read More »

ಮಂಗಳೂರು: ಬಸ್ ಗಳ ಮಧ್ಯೆ ಭೀಕರ ಅಪಘಾತ..!

ಮಂಗಳೂರು : ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದ ಘಟನೆ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.  ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More »

You cannot copy content of this page.