Recent Posts

ಕಾಂತಾರ.. ಕರ್ನಾಟಕದಲ್ಲಿ ಒಂದು ಕೋಟಿ ಟಿಕೆಟ್​ ಮಾರಾಟ!!

ಕಾಂತಾರ ಸಿನಿಮಾ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಕರ್ನಾಟಕದಲ್ಲೇ ಬರೋಬ್ಬರಿ ಒಂದು ಕೋಟಿಗೂ ಅಧಿಕ ಕಾಂತಾರ ಚಿತ್ರದ ಟಿಕೆಟ್​ಗಳು ಮಾರಾಟವಾಗಿದೆ. ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಸಿನಿಮಾ ರಂಗದಲ್ಲಿ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ. ನಿರೀಕ್ಷೆಗೂ ಮೀರಿ ಯಶಸ್ಸು ಕಾಣುತ್ತಿರುವ ಕಾಂತಾರ ಸಿನಿಮಾ ಈಗ ಹಿಂದಿ, ತೆಲುಗು, ತಮಿಳು ಹಾಗು ಮಲೆಯಾಳಂ ಭಾಷೆಗೆ ಡಬ್ಬಿಂಗ್ ಆಗಿ ಸಿನಿಮಾ ಪ್ರೇಕ್ಷಕರು ಅಲ್ಲದೇ ಸಿನಿಮಾ ಸೆಲೆಬ್ರಿಟಿಗಳು ಮೆಚ್ಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅಭಿನಯಿಸಿ ನಿರ್ದೇಶನ ಮಾಡಿರೋ ಕಾಂತಾರ ಸಿನಿಮಾ ದಕ್ಷಿಣ ಭಾರತದಲ್ಲಿ ಹೊಸ …

Read More »

BIG BREAKING NEWS: ಹಿಂದೂ ಪದದ ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದ ಶಾಸಕ ಸತೀಶ್ ಜಾರಕಿಹೊಳಿ

ಬೆಂಗಳೂರು: ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಜೊತೆಗೆ ಜನತೆಯಲ್ಲಿ ವಿಷಾದವನ್ನು ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ …

Read More »

ಮಂಗಳೂರು :ಜಿಲ್ಲಾಡಳಿತ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿದ ಅಕ್ರಮ ಮರಳು ದಂಧೆಕೋರರು

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ. ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಮತ್ತೆ ನಸುಕಿನ …

Read More »

You cannot copy content of this page.