Recent Posts

ಉಡುಪಿ: ಹಾಲಿನ ದರ ಕನಿಷ್ಠ ಐದು ರೂಪಾಯಿ ಕೂಡಲೇ ಏರಿಸಬೇಕೆಂದು ಸಹಕಾರ ಭಾರತಿ ವತಿಯಿಂದ ಸಿಎಂಗೆ ಮನವಿ

ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನ.7ರಂದು ಉಡುಪಿಗೆ ಭೇಟಿ ನೀಡಿದ್ದರು. ಈ ವೇಳೆ ಹೈನುಗಾರ ರೈತರಿಂದ ಖರೀದಿಸುವ ಹಾಲಿನ ದರ ಕನಿಷ್ಠ ಐದು ರೂಪಾಯಿ ಕೂಡಲೇ ಏರಿಸಬೇಕೆಂದು ಸಹಕಾರ ಭಾರತಿ ವತಿಯಿಂದ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಅವರು ಸಿಎಂ ಗೆ ಮನವಿಯನ್ನು ಸಲ್ಲಿಸಲಾಯಿತು. ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದರ ಒಕ್ಕೂಟದ ರಚನೆ ಮತ್ತು ಸಾಲ ಮನ್ನ ಯೋಜನೆಯಲ್ಲಿ ಬಾಕಿ ಉಳಿದಿರುವ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದರು. ಈ ಸಂದರ್ಭದಲ್ಲಿ , ಸಹಕಾರ ಭಾರತಿ ಹಾಲು ಪ್ರೊಕೋಸ್ಟದ ರಾಜ್ಯ ಸಂಚಾಲಕ ಸಾಣೂರು …

Read More »

‘ಹಿಂದೂ’ ಭಾರತೀಯ ಪದವೇ ಅಲ್ಲ, ಅದರ ಅರ್ಥ ಬಹಳ ಅಶ್ಲೀಲ : ವಿವಾದಕ್ಕೆ ಕಾರಣವಾಯ್ತು ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಅವರ ಹೇಳಿಕೆಯ ವಿಡಿಯೋವನ್ನು ಅಂತರ್ಜಾಲದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜಾರಕಿಹೊಳಿ, ಹಿಂದೂ ಪದದ ಅರ್ಥವನ್ನು ತಿಳಿದ ನಂತರ ನಾಚಿಕೆಪಡುತ್ತಾರೆ ಮತ್ತು ಅದರ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್‌ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ಜನಸಂಕಲ್ಪ ಯಾತ್ರೆ ಬಳಿಕ ರಾಜ್ಯಾದ್ಯಂತ ಬಿಜೆಪಿ ರಥಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ : ಜನಸಂಕಲ್ಪ ಯಾತ್ರೆ ಮುಗಿದ ನಂತರ ರಾಜ್ಯಾದ್ಯಂತ ರಥ ಯಾತ್ರೆ ಪ್ರಾರಂಭವಾಗಲಿದ್ದು. 224 ಕ್ಷೇತ್ರಗಳಲ್ಲಿಯೂ ಕೂಡ ರಥಯಾತ್ರೆ ಸಂಚರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆ ಕಲ್ಯಾಣ ಕರ್ನಾಟಕದಲ್ಲಿ ನಡೆದಿದ್ದು, ಕರಾವಳಿಯಲ್ಲಿ ಇಂದು ಪ್ರಾರಂಭವಾಗುತ್ತಿದೆ. ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ನೀಡುತ್ತೇವೆ. ನಾಳೆ ಗದಗ, ಹಾವೇರಿ, ನಾಡಿದ್ದು ಬೆಳಗಾವಿಯಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿ ಪಕ್ಷದ ಸಂಘಟನೆಯ ಜೊತೆಗೆ ಜನಸಂಘಟನೆಯನ್ನು ಮಾಡಲಿದ್ದೇವೆ. ಅಭೂತಪೂರ್ವ ಬೆಂಬಲ ಎಲ್ಲೆಡೆ ವ್ಯಕ್ತವಾಗುತ್ತಿದೆ. ಉತ್ಸಾಹ ಮೂಡಿದೆ. ಈ …

Read More »

You cannot copy content of this page.