Recent Posts

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಐವರು ಗಂಭೀರ

ಕಡಬ : ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Read More »

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್‌ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್‌ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

Read More »

 ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್‌ ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಾರ್ತಿಕ ಮಾಸ ಹುಣ್ಣಿಮೆ ದಿನ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ.ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ ಚಂದ್ರಗ್ರಹಣ ಸಂಭವಿಸಲಿದೆ. 15 ದಿನದ ಅಂತರದಲ್ಲಿ ಎರಡು ಗ್ರಹಣ ಸಂಭವಿಸಿರೋದ್ರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಹಜವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಭರಣಿ ನಕ್ಷತ್ರ ಮೇಷರಾಶಿಯಲ್ಲಿ ಸಂಭವಿಸಲಿರುವ ಗ್ರಹಣದಿಂದ ಕೆಲ ರಾಶಿಯವರಿಗೆ ಅಪತ್ತು ಕೆಲ ರಾಶಿಯವರಿಗೆ ಉತ್ತಮವೂ ಆಗಲಿದೆ ಎನ್ನುವ ವಿಶ್ಲೇಷಣೆಗಳು ಕೇಳಿಬಂದಿದೆ. ರಾಹುಗ್ರಸ್ಥ ಚಂದ್ರ ಗ್ರಹಣದ ಅವಧಿ ಹೀಗಿದೆ:> ಗ್ರಹಣ …

Read More »

You cannot copy content of this page.