Recent Posts

 ಗಣೇಶ ಚತುರ್ಥಿ: ದ.ಕ.ದಲ್ಲಿ ಸೆ.19ಕ್ಕೆ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ರಜೆ ಬದಲಾವಣೆ ಕುರಿತಂತೆ ನಿರ್ಧಾರ ಇನ್ನೂ ಆಗಿಲ್ಲ.

Read More »

ವಿಟ್ಲ : ಆತ್ಮಹತ್ಯೆಗೆ ಯತ್ನಿಸಿದ ಸಹೋದರರು – ಓರ್ವನ ಸ್ಥಿತಿ ಗಂಭೀರ

ವಿಟ್ಲ: ಇಲ್ಲಿನ ಕುದ್ದುಪದವು ಎಂಬಲ್ಲಿನ ನಿವಾಸುಗಳಾದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೈರ ಮೂಲದ ಕುದ್ದುಪದವು ನಿವಾಸಿಗಳಾದ ಪವನ್ ಮತ್ತು ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಸಹೋದರರು. ವಿಷ ಸೇವನೆಯಿಂದ ತೀವ್ರ ಅಸ್ವಸ್ಥರಾದ ಇವರಿಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಎರಡು ಪ್ರತ್ಯೇಕ ವಾಹನಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ . ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿದ್ದಾರೆ. …

Read More »

ಚೈತ್ರಾ ಕುಂದಾಪುರ ಸೆ.23ರವರೆಗೆ ಸಿಸಿಬಿ ಕಸ್ಟಡಿಗೆ- ನ್ಯಾಯಾಲಯ ಆದೇಶ

ಉಡುಪಿ: ಚೈತ್ರಾ ಕುಂದಾಪುರ ಅವರನ್ನು ಬುಧವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ. ವಂಚನೆ ಆರೋಪದಲ್ಲಿ ನಡುರಾತ್ರಿ ಹೊತ್ತಿಗೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾರೆ ಎಂದು ಹೇಳಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ, ಸೆಪ್ಟೆಂಭರ್ 23ರವರೆಗೆ ಸಿಸಿಬಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

Read More »

You cannot copy content of this page.