Recent Posts

 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 77.44% ಮತದಾನ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ 77.44% ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 77.44% ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ನಿಖರ ಶೇಕಡಾವಾರು ಮತದಾನದ ವಿವರ ಮತಗಟ್ಟೆ ಅಧಿಕಾರಿಗಳು ನೀಡುವ ಕೊನೆಯ ಹಂತದ ಮತದಾನದ ಪ್ರಮಾಣದ ಬಳಿಕ ತಿಳಿದುಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಂತಿಯುತ ಚುನಾವಣೆ ನಡೆದಿದೆ. ಸೂಕ್ಷ್ಮ ಮತಗಟ್ಟೆಗಳಲ್ಲೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂಜಾನೆಯಿಂದಲೇ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

Read More »

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿತ..!

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್​ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್​ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ …

Read More »

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌ ದಾಖಲು

2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 30.96% ದಾಖಲಾಗಿದೆ.

Read More »

You cannot copy content of this page.