Recent Posts

ಮತದಾನದ ದಿನ ರಜೆ ನೀಡದೆ ಇದ್ದರೆ ಕ್ರಮ: ಮುಖ್ಯ ಚುನಾವಣಾಧಿಕಾರಿ

ಕರ್ನಾಟಕದಲ್ಲಿ ಏ.268 & ಮೇ 7ರಂದು ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಿದೆ. ಈ 2ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿ ನಾವು IT ವಲಯ ಸೇರಿ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು ಅಲ್ಲಿನ CEO ಮತ್ತು ಮ್ಯಾನೇಜ್‌ಮೆಂಟ್‌ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು

Read More »

ಮಂಗಳೂರು : ನಿರ್ಮಲಾ ಟ್ರಾವೆಲ್ಸ್ ಸಂಸ್ಥಾಪಕಿ ನಿಧನ

ಮಂಗಳೂರು: ಮಂಗಳೂರಿನ ಪ್ರವಾಸೋಧ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ನಿಧನರಾಗಿದ್ದಾರೆ. ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ. ನಿರ್ಮಲಾ ಅವರು ಪತಿ ಸಿ. ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

Read More »

ಉಜಿರೆ: ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ, ದೂರು- ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಉಜಿರೆಯ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ಆರೋಪಿಯನ್ನು ಶಿಕ್ಷಕ ವಿರಾಜ್ ಜೈನ್ ಎಂದು ಗುರುತಿಸಲಾಗಿದೆ. ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಮನೆಯವರು ವಿಚಾರಿಸಿದಾಗ ಶಿಕ್ಷಕ ವಿರಾಜ್ ಜೈನ್ ಕೆಲವು ತಿಂಗಳಿನಿಂದ ಅಶ್ಲೀಲವಾಗಿ ವರ್ತಿಸುತ್ತಾ ಅಶ್ಲೀಲ ವೀಡಿಯೊಗಳನ್ನು ತೋರಿಸಿತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಇದರಿಂದಾಗಿ ತಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಯವರು ಬಾಲಕಿಯನ್ನು ಪೊಲೀಸ್ ಠಾಣೆಗೆ …

Read More »

You cannot copy content of this page.