Recent Posts

ಉಡುಪಿ: ರೌಡಿಶೀಟರ್ ನಿವಾಸದ ಮೇಲೆ ಪೊಲೀಸರ ದಾಳಿ..!

ಉಡುಪಿ: ರೌಡಿ ದಿವಾಕರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ ಎಂಬಾತನು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನೆಲೆ ಮಂಗಳವಾರ ಸಿಬ್ಬಂದಿಯವರೊಂದಿಗೆ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಕಪ್ಪು ಬಣ್ಣದ ಬಟ್ಟೆ ಪೌಚ್‌, ಸಜೀವ ಮದ್ದು ಗುಂಡುಗಳು, ಮಸಿ ಕೋವಿಗೆ ಬಳಸುವ ಮದ್ದುಗುಂಡುಗಳು, ಪ್ಲಾಸ್ಟಿಕ್‌ ಪೌಚ್‌ ನಲ್ಲಿ …

Read More »

ಉಡುಪಿ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಮಾಜಿ ಸಚಿವ ಸಿ.ಟಿ ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

Read More »

ಅರುಣ್ ಕುಮಾರ್ ಪುತ್ತಿಲಗೆ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ ಸಂಸದ ಪ್ರತಾಪ್ ಸಿಂಹ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ ಪುತ್ತಿಲಗೆ ಸರಿಯಾಗೇ ಟಾಂಗ್ ಕೊಟ್ಟಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ …

Read More »

You cannot copy content of this page.