ಮಧ್ಯಪ್ರದೇಶದಲ್ಲೂ ಬಿಜೆಪಿಗೆ ಆಘಾತ? ಕರ್ನಾಟಕದ ನಿಖರ ಭವಿಷ್ಯ ನುಡಿದಿದ್ದ ಸಿ -ಡೈಲಿ ಟ್ಯ್ರಾಕರ್ ಹೇಳಿದ್ದೇನು?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿ ಬೀಗಿದ್ದ ಆಡಳಿತಾರೂಡಾ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿತ್ತು, ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಪಡೆಯುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ದೇಶದಲ್ಲಿ ನೆಲಕಚ್ಚಿದ್ದ ಕಾಂಗ್ರೆಸ್‌ಗೆ ಈ ಗೆಲುವು ಮರುಜೀವ ನೀಡಿದೆ ಎಂದೇ ಹೇಳಲಾಗಿತ್ತು.

ಕರ್ನಾಟಕದ ನಂತರ ಮಧ್ಯಪ್ರದೇಶದಲ್ಲಿ ಕೂಡ ಈ ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಕರ್ನಾಟಕ ಚುನಾವಣೆ ಸೋಲಿನ ನಂತರ, ಬಿಜೆಪಿ ಮಧ್ಯಪ್ರದೇಶದಲ್ಲಿ ಕೂಡ ಸೋಲನುಭವಿಸಲಿದ್ದು, ಮತ್ತೊಂದು ಆಘಾತ ಕಾದಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿವೆ. ಕರ್ನಾಟಕದಲ್ಲಿ ಗ್ಯಾರಂಟಿ ಘೋಷಣೆಗಳ ಮೂಲಕ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಮಧ್ಯಪ್ರದೇಶದಲ್ಲೂ ಅದೇ ತಂತ್ರ ಅನುಸರಿಸಲಿದೆ. ಈಗಾಗಲೇ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.

ಸಿ -ಡೈಲಿ ಟ್ಯ್ರಾಕರ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ!

ಚುನಾವಣೆಗೆ ಮುನ್ನ ಸಿ -ಡೈಲಿ ಟ್ಯ್ರಾಕರ್ ಸಮೀಕ್ಷೆ ನಡೆಸಿದ್ದು ಜನರ ಒಲವು ಯಾರ ಕಡೆಗಿದೆ ಎಂದು ತಿಳಿಯುವ ಪ್ರಯತ್ನ ಮಾಡಿದೆ. ಸಮೀಕ್ಷೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಮುಖಭಂಗ ಅನುಭವಿಸುವ ಸುಳಿವು ಸಿಕ್ಕಿದೆ.

ಒಟ್ಟು 230 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 79-85 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್ 135 ರಿಂದ 143 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದಾಗಿ ಸಮೀಕ್ಷೆ ಹೇಳಿದೆ. ಇತರರು 8-12 ಸ್ಥಾನಗಳಲ್ಲಿ ಗೆಲ್ಲುವುದಾಗಿ ಸಮೀಕ್ಷೆ ತಿಳಿಸಿದೆ. 

2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 119 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಿಜೆಪಿ 109 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಇತರರು 7 ಸ್ಥಾನಗಳಲ್ಲಿ ಗೆಲುವು ಕಂಡಿದ್ದರು. ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದರೂ, 2020ರಲ್ಲಿ ಆಪರೇಷನ್ ಕಮಲ ನಡೆಸಿದ್ದ ಬಿಜೆಪಿ ಕಾಂಗ್ರೆಸ್‌ನ ಆರು ಸಚಿವರು ಮತ್ತು 11 ಶಾಸಕರನ್ನು ಸೆಳೆಯುವ ಮೂಲಕ ಸರ್ಕಾರದ ಪತನಕ್ಕೆ ಕಾರಣವಾಗಿತ್ತು.

ಕರ್ನಾಟಕ ಚುನಾವಣೆ ಬಗ್ಗೆ ನಿಖರ ಭವಿಷ್ಯ ನುಡಿದಿದ್ದ ಸಿ -ಡೈಲಿ ಟ್ಯ್ರಾಕರ್ !

ಸಿ -ಡೈಲಿ ಟ್ಯ್ರಾಕರ್ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಿಖರ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿತ್ತು. ಕರ್ನಾಟಕ ಚುನಾವಣೆಗೆ ಮುನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್ 130-157, ಬಿಜೆಪಿ 37-56, ಜೆಡಿಎಸ್ 22-34 ಮತ್ತು ಇತರರು 00-03 ಸ್ಥಾನಗಳಲ್ಲಿ ಗೆಲ್ಲುವುದಾಗಿ ತಿಳಿಸಿತ್ತು . ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸುವುದಾಗಿ ಹೇಳಿತ್ತು, ಅದರಂತೆ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

-oneindia

Check Also

ಪ್ರಧಾನಿ ಹುದ್ದೆ ಕೊಟ್ಟರೂ ನಾನು ಕಾಂಗ್ರೆಸ್‌ ಜೊತೆ ಹೋಗಲ್ಲ – ಪವನ್ ಕಲ್ಯಾಣ್

ಹೈದರಾಬಾದ್- ನರೇಂದ್ರ ಮೋದಿ ನಮ್ಮ ದೇಶಕ್ಕೆ ಏನು ಮಾಡಿದ್ದಾರೆ ಎಂಬ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ನನ್ನ ಬೆಂಬಲ ಎಂದೆಂದಿಗೂ …

Leave a Reply

Your email address will not be published. Required fields are marked *

You cannot copy content of this page.