ಕುಕ್ಕೇಡಿ, ಎ. 12: ಸಾಮಾನ್ಯ ವ್ಯಕ್ತಿಯೂ ಓರ್ವ ಶಾಸಕನ ಬಳಿಗೆ ತೆರಳಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಮತ್ತು ಜನಪ್ರತಿನಿಧಿಗಳಲ್ಲಿ ಜನರ ಬಗೆಗಿನ ಅಂತರವನ್ನು ದೂರವಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಳೆದೈದು ವರ್ಷದಲ್ಲಿ ಕೆಲಸ ನಿರ್ವಹಿಸಿದ್ದೇನೆ ಎಂದು ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಹೇಳಿದರು.
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿಯಾಗಿ ನಿಟ್ಟಡೆ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಅನಿಲ್ ಹೆಗ್ಡೆಯವರ ಮನೆಯಲ್ಲಿ ನಡೆದ ಚುನಾವಣೆ ಪ್ರಚಾರದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಅಳದಂಗಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷರಾದ ಜನಾರ್ಧನ ಪೂಜಾರಿ, ಕುಕ್ಕೇಡಿ ಹಾಲು ಉ.ಸ. ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ನಿಟ್ಟಡೆ ಶಕ್ತಿಕೇಂದ್ರದ ಪುರಂದರ ಕುಲಾಲ್ ಹಾಗೂ ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.