ಬೆಳ್ತಂಗಡಿ, ಎ. 15: ಬೆಳ್ತಂಗಡಿ ಶ್ರೀ ಗುರುಗುರುನಾರಾಯಣ ವಾಣಿಜ್ಯ ಸಂಕೀರ್ಣದ ಮುಖ್ಯ ದ್ವಾರದ ಬಳಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿಯ ಉದ್ಘಾಟನೆಯು ಎ. 15ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ ಗೌಡ, ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ , ಪ್ರಚಾರ ಸಮಿತಿಯ ಸಂಯೋಜಕ ಭಗೀರಥ ಜಿ., ಮತ್ತು ಪಕ್ಷದ ನಾಯಕರುಗಳು, ಕಾರ್ಯಕರ್ತರು ಭಾಗವಹಿಸಿದರು.