2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಇಂದು (ಏ20) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು,
ನಾಮಪತ್ರ ಸಲ್ಲಿಸಲು ಕೆಲವೇ ಗಂಟೆಗಳು ಬಾಕಿ ಇರುವಾಗ ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದ 13 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಇದರಲ್ಲಿ ಬೆಳ್ತಂಗಡಿಗೆ ಪತ್ರಕರ್ತ ಅಶ್ರಫ್ ಆಲಿಕುಂಞ ಟಿಕೆಟ್ ಲಭಿಸಿದ್ದು, ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಸಿಗದ ಕಾರಣ ಜೆಡಿಎಸ್‌ಗೆ ಬಂದ ಮೋಹಿನುದ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಪರ್ಧಿಸುತ್ತಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಶಶಿಧರ್ ಚನ್ನಪ್ಪ ಯಲಿಗಾರ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ.