

ಬೆಂಗಳೂರು, ಜೂ. 8: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಬಿಪರ್‌ಜಾಯ್ ಚಂಡಮಾರುತ ಪ್ರಭಾವವು ಕರಾವಳಿ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದ ಮೇಲೂ ಬೀರಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಹಗುರ ಮಳೆ ಕಂಡು ಬರಲಿದೆ. ಜೂನ್ 11ರಿಂದ ಮೂರು ದಿನ ಮಳೆ ಅಬ್ಬರ ಹೆಚ್ಚಿರಲಿದೆ. ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಘೊಷಿಸಲಾಗಿದೆ.
ಜೂನ್ 11ರಿಂದ ಮೂರು ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಭಾರಿ ಮಳೆ ಬರಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.