

ಕುದ್ರೋಳಿ ಶ್ರೀಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ
ಮಂಗಳೂರು, ಜೂ., 09: ಬಿಸಿಲಿನ ಬೇಗೆಯಿಂದ ಬಳಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಕಣ್ಣಮುಚ್ಚಾಲೆ ಆಟ ಕಂಡುಬಂದಿದೆ. ಕರಾವಳಿಗೆ ಇನ್ನೂ ಮುಂಗಾರು ಪ್ರವೇಶ ಆಗಿಲ್ಲ. ಮತ್ತೊಂದೆಡೆ ಸುಡುಬಿಸಿಲಿನ ತಾಪಮಾನದಿಂದ ಇಲ್ಲಿನ ಜನರು ತತ್ತರಿಸಿದ್ದಾರೆ. ನದಿ, ತೊರೆಗಳು ಸಂಪೂರ್ಣ ಬತ್ತಿ ಹೋಗಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದ್ದರಿಂದ ಶೀಘ್ರ ಮಳೆ ಸುರಿಯುವಂತೆ ಹಾಗೂ ಲೋಕಕಲ್ಯಾರ್ಥವಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ ನೆರವೇರಿಸಲಾಗಿದೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಪದ್ಮರಾಜ್ ಆರ್., ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಸಾಯಿರಾಂ ಆರ್., ಕಾಂಗ್ರೆಸ್‌ನ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಕ್ಷೇತ್ರದ ಭಕ್ತರು ಪಾಲ್ಗೊಂಡಿದ್ದರು.