ರಾಜ್ಯ

ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ಬ್ಯಾನ್ ಮಾಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ …

Read More »

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲು | ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

ಬೆಂಗಳೂರು:ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Read More »

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ..!

ಬೆಂಗಳೂರು : ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ …

Read More »

ಕುಂದಾಪುರ : ಕಮಲಶಿಲೆ ದೇವಸ್ಥಾನದಲ್ಲಿ ಗೋ ಕಳ್ಳತನಕ್ಕೆ ಯತ್ನ…!!

ಕುಂದಾಪುರ : ಸಿದ್ದಾಪುರ ಸಮೀಪ ಕಮಲಶಿಲೆ ದೇವಸ್ಥಾನದಲ್ಲಿ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಸೈನ್‌ ಇನ್‌ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ ಎಂದು ವಿಚಾರ ಬೆಳಕಿಗೆ ಬಂದಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ 2.46ರ ವೇಳೆಗೆ ಇಬ್ಬರು ವ್ಯಕ್ತಿಗಳು ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲ ಮೂಲಕ ನುಗ್ಗಿ ಮೂರು ಹಸುಗಳ ಹಗ್ಗವನ್ನು ಕತ್ತಿಯಿಂದ ಕಡಿದು ಸಾಗಾಟಕ್ಕೆ ಯತ್ನಿಸಿದ್ದರು. ದೇವಸ್ಥಾನದ ವತಿಯಿಂದ ಸೈನ್‌ ಇನ್‌ ಸೆಕ್ಯುರಿಟೀಸ್‌ ಸಂಸ್ಥೆಯ ಲೈವ್‌ ಮಾನಿಟರಿಂಗ್‌ ಸಿಸಿಟಿವಿ ಹಾಕಿಸಲಾಗಿದ್ದು ಈ ಸಂಸ್ಥೆ 24 ತಾಸು …

Read More »

ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ …

Read More »

ಪೊಕ್ಸೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ- ಮಾಜಿ ಸಿಎಂ ಯಡಿಯೂರಪ್ಪ ಬಂಧನ ಸಾಧ್ಯತೆ..!

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ.   ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ. ಮತ್ತೊಂದೆಡೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಮಾಜಿ …

Read More »

ವಾಹನ ಸವಾರರಿಗೆ ಬಿಗ್‌ ರಿಲೀಫ್‌ : ‘HSRPʼ ನಂಬರ್ ಪ್ಲೇಟ್’ ಅಳವಡಿಕೆಗೆ ಗಡುವು ವಿಸ್ತರಣೆ..!

ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್‌ ರಿಲೀಫ್‌ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ …

Read More »

HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಗಡುವು ಅಂತ್ಯ

ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಕುರಿತ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿದ್ದು ಹೈಕೋರ್ಟ್‌ ನೀಡುವ ನಿರ್ದೇಶನ ಧರಿಸಿ HSRP  ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಸಾರಿಗೆ ಇಲಾಖೆ ನಿರ್ಧರಿಸಲಿದೆ. 2019ರ ಏಪ್ರಿಲ್‌ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಈವರೆಗೆ 35-40ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. ಹೈಕೋರ್ಟ್‌ ನೀಡುವ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Read More »

ನಟ ದರ್ಶನ್ ಗೆಳತಿ ಪವಿತ್ರಾಗೌಡ ಅರೆಸ್ಟ್‌..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್. ಆರ್ ನಗರ ಠಾಣೆ ಪೊಲೀಸರು ದರ್ಶನ್‌ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.   ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 …

Read More »

ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More »

You cannot copy content of this page.