

ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದ್ದಾಗಿದ್ದರೆ, ನೀವು ಶೀಘ್ರವೇ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ.

ಈ ಹಿಂದೆ ಸಾಮಾನ್ಯವಾಗಿ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದಕ್ಕೆ ಶುಲ್ಕವನ್ನು ಪಾವತಿಸಬೇಕಾಗಿತ್ತು. ಆದರೆ ಭಾರತೀಯ ವಿಶಿಷ್ಠ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್‌ಡೇಟ್ ಮಾಡಲು ಅವಕಾಶ ನೀಡಿದೆ.

ಹೌದು, ಆಧಾರ್ ದಾಖಲೆಗಳನ್ನು ಯುಐಡಿಎಐ ಪ್ಲಾಟ್‌ಫಾರ್ಮ್‌ನಲ್ಲಿ ಆನ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡಬಹುದಾಗಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಪ್ರಕಾರ, ಲಕ್ಷಾಂತರ ಭಾರತೀಯರು ಈ ಕ್ರಮದಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಆದರೂ ಕೂಡಾ ಉಚಿತ ಸೇವೆಗಳು 15 ಮಾರ್ಚ್ 2023 ರಿಂದ 14 ಜೂನ್ 2023 ರವರೆಗೆ ಮಾತ್ರ ಲಭ್ಯವಿರುತ್ತವೆ. ಈ ಉಚಿತ ಸೇವೆಯು ಮೈಆಧಾರ್ ಪೋರ್ಟಲ್‌ನಲ್ಲಿ ಮಾತ್ರ ಲಭ್ಯವಿದೆ. ಆಧಾರ್ ಕೇಂದ್ರಗಳಲ್ಲಿ 50 ರೂಪಾಯಿ ಶುಲ್ಕವಿದೆ.