ಸಿಲಿಂಡರ್ ಸ್ಪೋಟ; 10ಕ್ಕೂ ಅಧಿಕ ಮಂದಿಗೆ ಗಾಯ

ಮೈಸೂರು; ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ.

ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದ್ದು, ಒಂದೇ ಮನೆಯ ನಾಲ್ವರು ಮತ್ತು ಪಕ್ಕದ ಮನೆಯ ಆರು ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.