

ಬೆಂಗಳೂರು, ಜೂನ್ 4: ಕೆಎಂಎಫ್ ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನ ಕಡಿತಗೊಳಿಸಿದ್ದಕ್ಕೆ ಅಸಮಾಧಾನ ವ್ಯಕ್ತವಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕೆಎಂಎಫ್ ವ್ಯವಸ್ಥಾಒಕ ನಿರ್ದೇಶಕರ ಜೊತೆ ಸಭೆ ನಡೆಸಿದ್ದು, ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡದಂತೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಮನ್ಮುಲ್ ಮತ್ತು ಬಮುಲ್ ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿತ್ತು, ಉಚಿತ ಭಾಗ್ಯಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ರೈತರ ಆದಾಯಕ್ಕೆ ಕತ್ತರಿ ಹಾಕಿದೆ ಎಂದು ವಿರೋಧ ಪಕ್ಷಗಳು ಕಿಡಿ ಕಾರಿದ್ದವು. ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಏಕಾಏಕಿ ದರ ಕಡಿಮೆ ಮಾಡುವಂತಿಲ್ಲ, ಈ ಬಗ್ಗೆ ಸರ್ಕಾರದ ಜೊತೆ ಚರ್ಚೆ ನಡೆಸಬೇಕು, ಪ್ರೋತ್ಸಾಹಧನ ಕಡಿಮೆ ಮಾಡಿದರೆ ರೈತರಿಗೆ ತೊಂದರೆ ಆಗುತ್ತದೆ ಎಂದು ಸೂಚನೆ ಕೊಟ್ಟಿದ್ದಾರೆ.