ಕೊಡಗು: ಇತ್ತೀಚೆಗೆ ಹೃದಯಾಘಾತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಯುವಕರು ಮತ್ತು ಬಾಲಕರು ಹೃದಯಾಘತದಿಂದ ಸಾವನ್ನಪ್ಪುತ್ತಿದ್ದಾರೆ.
ಇದರಿಂದಾಗಿ ಪೋಷಕರಲ್ಲಿ ಆತಂಕ ಮೂಡಿಸಿದೆ. ಈಗ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 12 ವರ್ಷದ ಕೀರ್ತನ್ ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್ ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಇಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.