

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ ಎನ್ನುವಂತೆ, ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ನಡೆಯುತ್ತಿರುವಂತ ಸಚಿವ ಸಂಪುಟ ಸಭೆಯಲ್ಲಿ, ಹಲವು ಮಹತ್ವದ ಯೋಜನೆಗಳಿಗೆ ಒಪ್ಪಿಗೆಯ ಅಂಕಿತದ ಮುದ್ರೆ ಒತ್ತುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವಂತ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒದಗಿಸೋದಕ್ಕೆ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಇದಷ್ಟೇ ಅಲ್ಲದೇ ಕಳೆದ ಹಲವು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿಯ ಮುಷ್ಕರ ನಿರತ ಆರೋಗ್ಯ ಇಲಾಖೆಯ ಎನ್ ಹೆಚ್‌ಎಂ ಒಳಗುತ್ತಿಗೆ ನೌಕರರ ಖಾಯಂ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ವಿವಿಧ ರಾಜ್ಯಗಳಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿದ್ದಂತ ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿದಂತೇ, ಕರ್ನಾಟಕದಲ್ಲಿ ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆಯ ಹೊತ್ತಿನಲ್ಲಿ ನಡೆಯುತ್ತಿರುವಂತ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒದಗಿಸುವಂತ ನಿಟ್ಟಿನಲ್ಲಿ ಮಹತ್ವದ ಕಾರ್ಯಕ್ರಮಗಳ ಅನುಷ್ಠಾನಕ್ಕೂ ಅನುದಾನ ಒದಗಿಸಲಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಸಂಪುಟ ನಿರ್ಣಯಗಳ ಅಧಿಕೃತ ಮಾಹಿತಿ ಲಭ್ಯವಾಗಲಿದೆ.