ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

18 ಉಡುಪಿ, 19ನೇ ಸ್ಥಾನದಲ್ಲಿ ದ.ಕ.

ಚಿತ್ರದುರ್ಗಕ್ಕೆ ಮೊದಲ ಸ್ಥಾನ

ಬೆಂಗಳೂರು ಮೇ 8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‍ಎಸ್‍ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಬಾರಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಸುದ್ದಿಗೋಷ್ಟಿಯಲ್ಲಿ, ‘ಚಿತ್ರದುರ್ಗ ಹೆಚ್ಚು ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಜಿಲ್ಲೆ ಮಂಡ್ಯ, ಮೂರನೇ ಜಿಲ್ಲೆ ಹಾಸನ ಜಿಲ್ಲೆಯಾಗಿದೆ. ಬೆಂಗಳೂರು ಗ್ರಾಮಾಂತರ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಜಿಲ್ಲೆ ಯಾದಗಿರಿ ಜಿಲ್ಲೆಯಾಗಿದೆ. ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರು ಶೇ80.08ರಷ್ಟು ಉತ್ತೀರ್ಣರಾಗಿದ್ದಾರೆ’ ಎಂದು ತಿಳಿಸಿದೆ.

SSLCಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ ಬೀಮನಗೌಡ ಪಾಟೀಲ್-ವಿಜಯಪುರ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಿದ್ದು ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

Check Also

BREAKING : ಶಿವಮೊಗ್ಗದಲ್ಲಿ ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ

ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, …

Leave a Reply

Your email address will not be published. Required fields are marked *

You cannot copy content of this page.