ಹೈವೋಲ್ಟೇಜ್ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಎಣ್ಣೆಯೂ ಬಂದ್!

ಬೆಂಗಳೂರು, ಮೇ 08: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಕೊನೆಯ ಹಂತದ ಕಸರತ್ತನ್ನ ರಾಜಕೀಯ ಪಕ್ಷಗಳು ನಡೆಸುತ್ತಿವೆ.

ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ ಇಂದು(ಸೋಮವಾರ) ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದು. ಇನ್ನೂ ಮತದಾರರ ಮನಗೊಳಿಸಲು ಕಳೆದ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಇನ್ನೆರಡು ದಿನಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರವೇ ಬದಲಾಗಲಿದೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

Check Also

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ.. ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಎನ್ನುವಷ್ಟರಲ್ಲಿ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.