ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತರೊಬ್ಬರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ. ಪ್ಲಂಬರ್ ಕೆಲಸ ಮಾಡುತ್ತಿರುವ ಭಜರಂಗದಳ ಕಾರ್ಯಕರ್ತ ಮನೋಜ್ ಅವರು ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಆತನ ಮೇಲೆ ಹಲ್ಲೆ ನಡೆದಿದೆ.
ಮನೋಜ್ ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಗಾಯಗೊಂಡಿರುವ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್‌ಗೆ ಹಲ್ಲೆಯಾಗಿರುವುದನ್ನು ತಿಳಿದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದರು.
ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ ಆಯೋಜಿಸಲಾಗಿತ್ತು. ಆದರೆ, ಮನೋಜ್ ಸಮಾವೇಶಕ್ಕೂ ತೆರಳದೆ ಕೆಲಸಕ್ಕೆ ಹೋಗಿದ್ದರು. ಆದರೂ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ.