ರಾಜ್ಯದಲ್ಲಿ ಎರಡ್ಮೂರು ದೊಡ್ಡ ತಲೆಗಳು ಉರುಳುತ್ತೆ: ಕೋಡಿಮಠದ ಶ್ರೀ ಭವಿಷ್ಯ

ವಿಜಯನಗರ : ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಕೊರೊನಾ ಬಂದರೂ ಕೂಡ ಅಂತಹ ತೊಂದರೆಯಾಗಲ್ಲ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾತನಾಡಿದ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ 2023 ರ ಕುರಿತು ಭವಿಷ್ಯ ನುಡಿದಿದ್ದಾರೆ.

 

ಏನದು ಭವಿಷ್ಯ
‘ಒಲೆ ಹೊತ್ತಿ ಉರಿದರೆ,ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು’ ಎಂದು ಮಾರ್ಮಿಕವಾಗಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ . ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಕೊರೊನಾದಿಂದ ಯಾವುದೇ ಅಂತಹ ತೊಂದರೆಯಾಗಲ್ಲ.
. ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ.

ಸಂಕ್ರಾಂತಿ- ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಬಂದ ಹಾಗೆ ಈ ಬಾರಿ ಕೂಡ ಅದೇ ರೀತಿ ಮಳೆಯಾಗಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Check Also

ಕುಂದಾಪುರ : ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ …

Leave a Reply

Your email address will not be published. Required fields are marked *

You cannot copy content of this page.