

ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ. ಇಂದು ಬೆಳಗ್ಗೆ ತಾಯಿ ಮನೆಗೆಲಸಕ್ಕೆ ಹೋಗುವಾಗ ಮಗುವನ್ನೂ ಕರೆದುಕೊಂಡು ಹೋಗಿದ್ದರು. ತಾಯಿ ಮನೆಯೊಳಗೆ ಕೆಲಸ ಮಾಡುವ ಸಮಯದಲ್ಲಿ ಯುವಕನೋರ್ವ ಮಗುವನ್ನು ಎತ್ತಿಕೊಂಡು ಹೋಗಿದ್ದಾನೆ. ಪಾಳು ಬಿದ್ದ ಕೋಣೆಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಆರೋಪಿಯ ಹಿನ್ನೆಲೆ ಇನ್ನು ಗೊತ್ತಾಗಿಲ್ಲ. ರೇಪ್ ಬಗ್ಗೆ ಇನ್ನೂ ಮಾಹಿತಿ ಇಲ್ಲ, ವೈದ್ಯಕೀಯ ತಪಾಸಣೆ ನಂತರ ಅತ್ಯಾಚಾರದ ಬಗ್ಗೆ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.