

ಶಿವಮೊಗ್ಗ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಪೂರಿತ ಊಟ ಸೇವಿಸಿದ ಪರಿಣಾಮ ಅಸ್ವಸ್ಥಗೊಂಡ ಮಕ್ಕಳ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ.
ಮೊರಾರ್ಜಿ ದೇಸಾಯಿ ವಸತಿಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ.
ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಕೂಡಲೇ ಎಲ್ಲಾ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದ್ದು, ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರು. ನಂತರ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯದ ಕುರಿತು ವಿಚಾರಿಸಿದ್ದು, ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ.
ಇಂದು ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಅವರು ಮಾತನಾಡಿ, ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ 98 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಯಾವುದೇ ತೊಂದರೆ ಇಲ್ಲ. ಈಗಾಗಲೇ 70 ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದ್ದು, ತಡವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಇನ್ನು ಸ್ವಲ್ಪ ಕಾಲ ನಿಗಾ ವಹಿಸಿ ಅವರನ್ನೂ ಸಹ ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.