December 22, 2024
WhatsApp Image 2024-01-18 at 10.16.20 AM

ಎಸ್​ಎಸ್​ಎಲ್​ಸಿ (10ನೇ ತರಗತಿ) ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್​ 25ರಿಂದ ಏಪ್ರಿಲ್ 6ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಇನ್ನು ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.

ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ:

ಮಾರ್ಚ್ 25- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ + ಇಂಗ್ಲಿಷ್ NCERT, ಸಂಸ್ಕೃತ)

ಮಾರ್ಚ್ 27- ಸಮಾಜ ವಿಜ್ಞಾನ (ಕೋರ್‌ ಸಬ್ಜೆಕ್ಟ್‌)
ಮಾರ್ಚ್ 30 – ವಿಜ್ಞಾನ,ರಾಜ್ಯಶಾಸ್ತ್ರ
ಏಪ್ರಿಲ್ 2 – ಗಣಿತ,ಸಮಾಜ ಶಾಸ್ತ್ರ
ಏಪ್ರಿಲ್‌ 3- ಅರ್ಥಶಾಸ್ತ್ರ
ಏಪ್ರಿಲ್ 4- ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು).
ಏಪ್ರಿಲ್ 6- ದ್ವೀತಿಯ ಭಾಷೆ( ಇಂಗ್ಲೀಷ್, ಕನ್ನಡ).

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದು. ಈ ಹಿಂದೆ ಒಂದು ಬಾರಿ ವಾರ್ಷಿಕ ಪರೀಕ್ಷೆ ಬರೆದು, ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ತಾವು ಪಾಸಾಗಲಿ, ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು. ಮೂರರಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಮುಂದಿನ ಅನುಕೂಲಗಳಿಗಾಗಿ ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.

ಮೂರು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 : ಮಾರ್ಚ್‌ 30 ರಿಂದ ಏಪ್ರಿಲ್ 15 ರವರೆಗೆ. ಮೇ 8 ರಂದು ಫಲಿತಾಂಶ ಬಿಡುಗಡೆ. ಮೇ 23 ರಂದು ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ಜೂನ್ 12-19 ರವರೆಗೆ ಪರೀಕ್ಷೆ. ಜೂನ್ 29 ಕ್ಕೆ ರಿಸಲ್ಟ್‌ ಬಿಡುಗಡೆ. ಜುಲೈ 10 ರಂದು ಮರುಮೌಲ್ಯಮಾಪನದ ರಿಸಲ್ಟ್‌ ಬಿಡುಗಡೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 : ಜೂನ್ 29 ರಿಂದ ಆಗಸ್ಟ್‌ 5 ರವರೆಗೆ ಪರೀಕ್ಷೆ. ಆಗಸ್ಟ್‌ 19 ರಂದು ಫಲಿತಾಂಶ ಬಿಡುಗಡೆ. ಆಗಸ್ಟ್‌ 26 ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟವಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

ಮಾರ್ಚ್‌ 1- ಕನ್ನಡ, ಅರೇಬಿಕ್
ಮಾ. 4- ಗಣಿತ, ಶಿಕ್ಷಣ ಶಾಸ್ತ್ರ
ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾ.7- ಇತಿಹಾಸ, ಭೌತಶಾಸ್ತ್ರ
ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13- ಇಂಗ್ಲಿಷ್
ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾ. 16- ಅರ್ಥಶಾಸ್ತ್ರ
ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.22- ಹಿಂದಿ

About The Author

Leave a Reply

Your email address will not be published. Required fields are marked *

You cannot copy content of this page.