

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಆ ಬಳಿಕ ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗುತ್ತದೆ. ಕೆಲವರ ಕಾರ್ಡ್ ಸಂಪೂರ್ಣ ರದ್ದಾಗಲಿದೆ ಎನ್ನಲಾಗುತ್ತಿತ್ತು. ಹೀಗಾಗಿ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗುವ ಆತಂಕದಲ್ಲಿದ್ದವರಿಗೆ ಸರ್ಕಾರ ಮರುಸ್ಪಷ್ಟನೆ ಮೂಲಕ ಗುಡ್ ನ್ಯೂಸ್ ನೀಡಿದೆ.
ಅದೇನು ಅಂತ ಮುಂದೆ ಓದಿ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಲವು ಕುಟುಂಬಗಳಲ್ಲಿ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದ್ದವರು ಉತ್ತಮ ಆದಾಯ ಗಳಿಸುವ ಉದ್ಯೋಗಗಳಿಗೆ ಸೇರಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಅಂಥವರ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಿಸಲಾಗುತ್ತದೆ. ಇದೊಂದು ಸಹಜ ಪ್ರಕ್ರಿಯೆ ಎಂಬುದಾಗಿ ತಿಳಿಸಿದ್ದಾರೆ.
ಯಾವುದೇ ಸರ್ಕಾರ ಇದ್ದರೂ, ಇದನ್ನೇ ಮಾಡಬೇಕಾಗುತ್ತದೆ. ನಮ್ಮ ಸರ್ಕಾರವು ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.