

ಹದಿನಾರನೇ ಕರ್ನಾಟಕ ವಿಧಾನಸಭೆಗೆ ನಾಮಪತ್ರ ಸಲ್ಲಿಸಲು ಇಂದು (ಏ. 20) ಕೊನೆಯ ದಿನವಾಗಿದೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಅಂದಹಾಗೆ ಮತದಾನದ ದಿನ ತಪ್ಪದೇ ನಿಮ್ಮ ಹಕ್ಕು ಚಲಾವಣೆ ಮಾಡಿ. ಇದು ರೂರಲ್‌ನ್ಯೂಸ್‌ಎಕ್ಸ್‌ಪ್ರೆಸ್ ಕಾಳಜಿ.