March 16, 2026
WhatsApp Image 2024-01-23 at 8.43.37 AM

ಮಂಡ್ಯ: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

 

ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.

 

About The Author

Leave a Reply

Your email address will not be published. Required fields are marked *

You cannot copy content of this page.