ಆಳ್ವಾಸ್‌ನಿಂದ ರೂ. 3 ಲಕ್ಷ, ಉಚಿತ ಶಿಕ್ಷಣದ ಘೋಷಣೆರಾಜ್ಯದಲ್ಲಿ ಪ್ರಥಮ ಸ್ಥಾನಗಳಿಸಿದ ಕು| ಅನನ್ಯಾಗೆ ಬಂಪರ್ ಕೊಡುಗೆ!

ಮೂಡಬಿದಿರೆ, ಎ. 23: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು| ಅನನ್ಯಾ 600ರಲ್ಲಿ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನಗಳಿಸಿದ್ದು, ಈಕೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ರೂ. 3 ಲಕ್ಷ ನಗದು ಬಹುಮಾನ ನೀಡಲಾಗುವುದು ಮತ್ತು ಆಕೆಯ ಮುಂದಿನ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ತಿಳಿಸಿರುವುದಾಗಿ ವರದಿಯಾಗಿದೆ. ಅಲ್ಲದೆ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿರುವ ಕು| ದಿಶಾ ರಾವ್ ಅವರಿಗೆ ರೂ. ಒಂದು ಲಕ್ಷ ನಗದು ಪುರಸ್ಕಾರ ಹಾಗೂ ಮುಂದಿನ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು ಎಂದಿದ್ದಾರೆ.

Check Also

BREAKING : ಸ್ಯಾಂಡಲ್‌ವುಡ್‌ ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ ದ್ವಾರಕೀಶ್‌ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ದ್ವಾರಕೀಶ್ 1942ರ ಆಗಸ್ಟ್ 19ರಂದು ಜನಿಸಿದರು. …

Leave a Reply

Your email address will not be published. Required fields are marked *

You cannot copy content of this page.