March 24, 2026
WhatsApp Image 2026-03-24 at 4.54.01 PM

ಬೆಂಗಳೂರು : ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ ಕಾಂಗ್ರೆಸ್‌ ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ಸಿಟ್ಟು ಹೊರಹಾಕಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ.

ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್‌ ಮೆಚ್ಚಿಸಲು ಕನ್ನಡಿಗರ ತೆರಿಗೆ ದುಡ್ಡನ್ನು, ಪ್ರಿಯಾಂಕ್‌ ಗಾಂಧಿ ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನೀಡುವ ಮೂಲಕ ಬೇಕಾಬಿಟ್ಟಿ ಪೋಲು ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮಉದಾರವಾದವನ್ನು ಮೊದಲು ಬಾಕಿ ಹಣ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಗುತ್ತಿಗೆದಾರರ ಮೇಲೆ ತೋರಿಸಿ, ಅಕಾಲಿಕ ಮಳೆಗೆ ಬೆಳೆ ಕಳೆದುಕೊಂಡು ಆರ್ಥಿಕ ಸಮಸ್ಯೆಗೆ ಸಿಲುಕಿರುವ ರಾಜ್ಯದ ಅನ್ನದಾತರಿಗೆ ಪರಿಹಾರ ನೀಡಿ ನಿಮ್ಮ ದೊಡ್ಡತನ ಪ್ರದರ್ಶಿಸಿ. ಅದನ್ನು ಬಿಟ್ಟು ಕನ್ನಡಿಗರ ತೆರಿಗೆ ಹಣದಲ್ಲಿ ಜಾತ್ರೆ ಮಾಡುವುದನ್ನು ಮೊದಲು ನಿಲ್ಲಿಸಿ ಎಂದು ಆಕ್ರೋಶ ಹೊರಹಾಕಿದೆ

About The Author

Leave a Reply

Your email address will not be published. Required fields are marked *

You cannot copy content of this page.