March 5, 2026
geetha shivaraj

ಬೆಂಗಳೂರು, ಎ. 27: ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರಿ, ಪ್ರಸಿದ್ಧ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ (ಎ.28) ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಗೀತಾ ಶಿವರಾಜ್‌ಕುಮಾರ್ ಅವರ ಸಹೋದರರಾದ ಕುಮಾರ ಬಂಗಾರಪ್ಪ (ಬಿಜೆಪಿ) ಮತ್ತು ಮಧು ಬಂಗಾರಪ್ಪ (ಕಾಂಗ್ರೆಸ್) ಸೊರಬ ಕ್ಷೇತ್ರದಲ್ಲಿ ಪರಸ್ಪರ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಸೇರಿದ ಬಳಿಕ ಗೀತಾ ಅವರು ಮಧು ಬಂಗಾರಪ್ಪ ಪರ ಸಕ್ರೀಯವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
೨೦೧೪ರಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದ ಗೀತಾ ಶಿವರಾಜ್ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸೋಲು ಕಂಡಿದ್ದರು. ಮೂಡಿಗೆರೆ ಮಾಜಿ ಶಾಸಕ, ಜೆಡಿಎಸ್ ಮುಖಂಡ ಬಿ.ಬಿ. ನಿಂಗಯ್ಯ ಅವರು ಕೂಡ ಶುಕ್ರವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

source- Prajavani

s

About The Author

Leave a Reply

Your email address will not be published. Required fields are marked *

You cannot copy content of this page.