ಆಧಾರ್ ಕಾರ್ಡ್ ಉಚಿತ ಅಪ್‌ಡೇಟ್ ಗಡುವು ಸಮೀಪ, ಶುಲ್ಕದಿಂದ ತಪ್ಪಿಸಿಕೊಳ್ಳಿ

ನಮ್ಮ ಎಲ್ಲ ವಹಿವಾಟುಗಳಿಗೆ ಪ್ರಸ್ತುತ ಆಧಾರ್ ಕಾರ್ಡ್ ಅತೀ ಪ್ರಮುಖವಾಗಿದೆ. ಎಲ್ಲ ಪ್ರಮುಖ ದಾಖಲೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗುತ್ತಿದೆ. ಈ ನಡುವೆ ಹತ್ತು ವರ್ಷಕ್ಕಿಂತ ಹಳೆಯದಾದ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ.

ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವವರಿಗೆ ಆನ್‌ಲೈನ್ ಮೂಲಕ ಉಚಿತವಾಗಿ ಅಪ್‌ಡೇಟ್ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇತ್ತೀಚೆಗೆ ಅವಕಾಶ ನೀಡಿದೆ. ಆದರೆ ಅದಕ್ಕೆ ಗಡುವನ್ನು ಕೂಡಾ ನಿರ್ಧಾರ ಮಾಡಲಾಗಿದೆ. ಆ ಗಡುವು ಸಮೀಪಿಸುತ್ತಿದೆ.

ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಯುಐಡಿಎಐ ಮಾರ್ಚ್‌ನಲ್ಲಿ ಈ ಉಚಿತ ವ್ಯವಸ್ಥೆಯ ನಿರ್ಧಾರವನ್ನು ತೆಗೆದುಕೊಂಡಿದೆ. ಮೈಆಧಾರ್ ಪೋರ್ಟಲ್‌ನಲ್ಲಿ ಉಚಿತ ಡಾಕ್ಯುಮೆಂಟ್ ಅಪ್‌ಡೇಟ್ ಲಾಭವನ್ನು ಜನರು ಪಡೆಯಬಹುದಾಗಿದೆ. ಮಾರ್ಚ್ 15, 2023ರಿಂದ ಜೂನ್ 14, 2023ರವರೆಗೆ ಈ ಯುಐಡಿಎಐನ ಉಚಿತ ಸೇವೆಯು ಲಭ್ಯವಿದೆ.

ಈ ಸೇವೆಯು ಮೈಆಧಾರ್ ಪ್ಲಾಟ್‌ಫಾರ್ಮ್‌ನಲ್ಲಿ ಮಾತ್ರ ಉಚಿತವಾಗಿ ಲಭ್ಯವಾಗುತ್ತದೆ ಎಂಬುವುದು ತಿಳಿದಿರಿ. ಈ ಹಿಂದೆ ಇರುವಂತೆಯೇ ನೀವು ಆಧಾರ್ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದಾದರೆ 50 ರೂಪಾಯಿಯನ್ನು ಪಾವತಿ ಮಾಡುವುದು ಕಡ್ಡಾಯವಾಗಿದೆ. 

ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದು ಹೇಗೆ? 

ಹಂತ 1: ಯುಐಡಿಎಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಹಂತ 2: ‘My Aadhaar’ ಮೇಲೆ ಕ್ಲಿಕ್ ಮಾಡಿ 

ಹಂತ 3: ‘Update Your Aadhaar’ ಅನ್ನು ಆಯ್ಕೆ ಮಾಡಿಕೊಳ್ಳಿ 

ಹಂತ 4: ‘Update demographics data online’ ಮೇಲೆ ಕ್ಲಿಕ್ ಮಾಡಿ 

ಹಂತ 5: ‘Proceed to update Aadhaar’ ಅನ್ನು ಬಳಿಕ ಆಯ್ಕೆ ಮಾಡಿ

 ಹಂತ 6: ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ 

ಹಂತ 7: ಕ್ಯಾಪ್ಚಾ ವೆರಿಫಿಕೇಷನ್ ಅನ್ನು ಮಾಡಿ 

ಹಂತ 8: Send OTP ಮೇಲೆ ಕ್ಲಿಕ್ ಮಾಡಿ 

ಹಂತ 9: ‘Update Demographics Data’ ಮೇಲೆ ಕ್ಲಿಕ್ ಮಾಡಿ 

ಹಂತ 10: ನವೀಕರಿಸಲು ವಿವರಗಳ ಆಯ್ಕೆಯನ್ನು ಆಯ್ಕೆಮಾಡಿ

 ಹಂತ 11: ಹೊಸ ವಿವರಗಳನ್ನು ನಮೂದಿಸಿ 

ಹಂತ 12: ದಾಖಲೆಗಳ ಪುರಾವೆಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಿ 

ಹಂತ 13: ನಮೂದಿಸಿದ ಮಾಹಿತಿಯು ನಿಖರವಾಗಿದೆಯೇ ಎಂದು ಪರಿಶೀಲಿಸಿ, ಒಟಿಪಿ ಉಲ್ಲೇಖಿಸಿದರೆ ಪ್ರಕ್ರಿಯೆ ಪೂರ್ಣವಾಗಲಿದೆ.

ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಮತ್ತು ಇತರೆ ಮಾಹಿತಿಯಲ್ಲಿ ಬದಲಾವಣೆಗಳಿದ್ದರೆ ಅದನ್ನು ಅಪ್‌ಡೇಟ್ ಮಾಡುವುದು ಅಥವಾ ಆ ಮಾಹಿತಿಯನ್ನು ಮತ್ತೆ ಅಪ್‌ಡೇಟ್ ಮಾಡುವುದೇ ಆಧಾರ್ ಅಪ್‌ಡೇಟ್ ಆಗಿದೆ.

ಸಾಮಾನ್ಯವಾಗಿ ಒಂದು ಮಗುವಿಗೆ 5 ವರ್ಷವಾದಾಗ ಮತ್ತು 15 ವರ್ಷವಾದಾಗ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡಬೇಕಾಗುತ್ತದೆ. ಅದನ್ನು ಹೊರತುಪಡಿಸಿ ಪ್ರಸ್ತುತ ಯುಐಡಿಎಐ ಸೂಚನೆಯಂತೆ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಅನ್ನು ಮಾಡಿ, ಬಳಿಕ ಯಾವುದೇ ಅಪ್‌ಡೇಟ್ ಮಾಡಿಲ್ಲವೆಂದಾದರೆ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಮುಖ್ಯವಾಗಿದೆ. ಇದಕ್ಕಾಗಿ ಮಾರ್ಚ್ 15ರಿಂದ ಜೂನ್ 14ರವರೆಗೆ ಗಡುವು ನೀಡಲಾಗಿದೆ. ಆದರೆ ಈ ಸೇವೆಯು ಶುಲ್ಕ ರಹಿತವಾಗಿದೆ. 12 ಡಿಜಿಟ್ ಸಂಖ್ಯೆಯ ಆಧಾರ್ ಕಾರ್ಡ್‌ನಲ್ಲಿ ಯಾವುದೇ ಬದಲಾವಣೆಯನ್ನು ನೀವು ಮಾಡಲು ಬಯಸಿದರೆ, ಯುಐಡಿಎಐ 50 ರೂಪಾಯಿ ಶುಲ್ಕವನ್ನು ವಿಧಿಸುತ್ತದೆ. ಪ್ರಮುಖವಾಗಿ 10 ವರ್ಷ ಅಥವಾ ಅದಕ್ಕೂ ಹಿಂದೆ ಬಳಕೆದಾರರು ಗುರುತಿನ ಪುರಾವೆ (ಪಿಒಐ) ಮತ್ತು ವಿಳಾಸದ ಪುರಾವೆಯಂತಹ (ಪಿಒಎ) ವಿವರಗಳನ್ನು ಪರಿಷ್ಕರಿಸುವುದಾದರೆ ಈ ದಂಡವನ್ನು ಪಾವತಿ ಮಾಡಬೇಕಾಗುತ್ತದೆ.

 source – oneindia

Check Also

ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ …

Leave a Reply

Your email address will not be published. Required fields are marked *

You cannot copy content of this page.