May 19, 2026
WA_1779168197441

ನವದೆಹಲಿ: ಕೊಚ್ಚಿಯಲ್ಲಿ ವಾಟರ್ ಮೆಟ್ರೋ ಯಶಸ್ವಿಯಾದ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪರಿಚಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ದೇಶದ 18 ಪ್ರಮುಖ ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ಪರಿಚಯಿಸಲು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ತಯಾರಿ ನಡೆಸಿದೆ. ಅಲ್ಲದೇ ಸಚಿವಾಲಯ ಈಗಾಗಲೇ ಕರಡು ರಾಷ್ಟ್ರೀಯ ಜಲ ಮೆಟ್ರೋ ನೀತಿಯನ್ನೂ ಸಿದ್ಧಪಡಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಮೊದಲ ಹಂತದಲ್ಲಿ ಉತ್ತರ ಪ್ರದೇಶದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್, ಶ್ರೀನಗರ ಮತ್ತು ಪಾಟ್ನಾವನ್ನು ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪಟ್ಟಿಗೆ ಸೇರಿಸಲಾಗುತ್ತದೆ. 2ನೇ ಹಂತದಲ್ಲಿ ಅಸ್ಸಾಂನ ಎರಡು ನಗರಗಳಾದ ತೇಜ್‌ಪುರ ಮತ್ತು ದಿಬ್ರುಗಢದಲ್ಲಿ ಈ ಸಾರಿಗೆ ವ್ಯವಸ್ಥೆ ಪರಿಚಯಿಸಲಾಗುತ್ತದೆ.

About The Author

Leave a Reply

Your email address will not be published. Required fields are marked *

You cannot copy content of this page.