ಉಡುಪಿ

ಉಡುಪಿ: ಮೆಹೆಂದಿ ಮನೆಯಲ್ಲಿ ತಡರಾತ್ರಿವರೆಗೆ ಡಿಜೆ ಸೌಂಡ್- ಪೊಲೀಸ್ ದಾಳಿ..!

ಮಲ್ಪೆ: ಕಲ್ಯಾಣಪುರದ ಮನೆಯೊಂದರಲ್ಲಿ ತಡರಾತ್ರಿವರೆಗೆ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಬಳಸಿದ್ದ ಬಗ್ಗೆ ಸಾರ್ವಜನಿಕರ ದೂರಿನ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿದ್ದಾರೆ. ಕಲ್ಯಾಣಪುರ ಶೇಖರ ಬೈಕಾಡಿ ಅವರ ಮಗಳ ಮದುವೆ ಪ್ರಯುಕ್ತ ಮೆಹಂದಿ ಶಾಸ್ತ್ರಕ್ಕೆ ತಡರಾತ್ರಿವರೆಗೆ ಡಿಜೆ ಬಳಸಿ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಬಗ್ಗೆ ಸ್ಥಳೀಯರು ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದಾಗ ನಂದಾದೀಪ ಹೆಸರಿನ ಡಿಜೆ ಸೌಂಡ್ಸ್ ಎಂದು ತಿಳಿದು ಬಂದಿದ್ದು, ಅದರ ಮಾಲೀಕ ನವೀನ್ ರವರಿಗೆ ಸಂಬಧಿಸಿದ್ದಾಗಿರುತ್ತದೆ. ತಕ್ಷಣ ಡಿಜೆ ಸೌಂಡ್ ನಿಲ್ಲಿಸಿದ …

Read More »

ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣ, ಡ್ರಗ್ಸ್ ಜಾಲದ ಬಗ್ಗೆ ಎಲ್ಲ ಆಯಾಮಗಳಲ್ಲಿ ತನಿಖೆ – ಉಡುಪಿ ಎಸ್ಪಿ ಮಾಹಿತಿ

ಉಡುಪಿ : ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣದ ತನಿಖೆ ಒಂದು ಆಯಾಮದಲ್ಲಿ ನಡೆದರೆ ,ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿರುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ.ಪ್ರಮುಖ ಆರೋಪಿ ಅಲ್ತಾಫ್ ಅತ್ಯಾಚಾರ ಎಸಗಿದ್ದರೆ ಅಭಯ್ ಎಂಬಾತ ಕೃತ್ಯ ನಡೆದ ಸ್ಥಳಕ್ಕೆ ಡ್ರಗ್ಸ್ ತಂದು ಕೊಟ್ಟಿದ್ದ. ಡ್ರಗ್ಸ್ ತಂದು ಕೊಟ್ಟವರಿಗೆ ತಿರುಪತಿ, ಬೆಂಗಳೂರು ತನಕ ಸಂಪರ್ಕ ಇತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಿಂದೂ ಯುವತಿಯನ್ನು ಆಗಸ್ಟ್ 24 ರಂದು ಅಪಹರಿಸಿ ಕೌಡೂರು ಬಳಿಯ ರಂಗನಪಲ್ಕೆಯ ಕಾಡಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ರಿಚರ್ಡ್ …

Read More »

ಉಡುಪಿ: ಆನ್ ಲೈನ್ ವಂಚನೆ ಪ್ರಕರಣ- ಆರೋಪಿಯ ಬಂಧನ..!

ಉಡುಪಿ: ಪ್ರಶಾಂತ್‌ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ,ಅವರ ಗಮನಕ್ಕೆ ಬಾರದೇ ಹಣ ವರ್ಗಾಯಿಸಿ ವಂಚಿಸಿದ್ದ ಸೈಬರ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಒರಿಸ್ಸಾ ರಾಜ್ಯದ ಬೈರಂಪುರದ ವಿಶಾಲ್‌‌ ಕೋನಪಾಲ(30) ಬಂಧಿತ ಆರೋಪಿ. ಪ್ರಶಾಂತ್ ಶೆಟ್ಟಿ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಯೂನಿಯನ್ ಬ್ಯಾಂಕ್ ಬೆಳ್ಮಣ್‌‌ ಶಾಖೆಯಲ್ಲಿ ಎರಡು ಖಾತೆಯನ್ನು ಹೊಂದಿರುತ್ತಾರೆ. ಎರಡು ಖಾತೆಗಳಲ್ಲಿ Paytm ಆನ್‌ಲೈನ್ ಪೆಮೆಂಟ್ ಸಿಸ್ಟ್ಂ ಅನ್ನು ಹೊಂದಿದ್ದು ಯಾರೋ ಅಪರಿಚಿತರು ಆನ್‌ಲೈನ್ ಮೂಲಕ ಅವರ ಖಾತೆಗಳಿಂದ ಹಂತ ಹಂತವಾಗಿ ಒಟ್ಟು ರೂ. 1,56,100ರೂ. ವನ್ನು ವರ್ಗಾಯಿಸಿಕೊಂಡಿದ್ದರು.ಇದೀಗ ಆರೋಪಿಯನ್ನು ಬಂಧಿಸಿ ಆತನಿಂದ 1,56,100 ರೂ. ವಶಪಡಿಸಿ …

Read More »

ಉಡುಪಿ: ವೈದ್ಯನಿಂದ ಕಿರುಕುಳ ಆರೋಪ – ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದ ದೂರು

ಉಡುಪಿ: ವೈದ್ಯನೊಬ್ಬ ತನ್ನ ಸಹಪಾಠಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು ಈ ಸಂಬಂಧ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಿರುಕುಳ ನೀಡಿದ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ. ಹೊರರಾಜ್ಯದವರಾದ ಇವರು ಪ್ರಾರಂಭದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗ ಡ್ಯಾನಿಷ್ ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ ಎನ್ನಲಾಗಿದೆ. ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕ್ಯಾಂಪಸ್‌ನಲ್ಲಿ ಪರಿಚಯವಾಗಿತ್ತು. ನಂತರ 2024ರ ಜನವರಿ 22ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಆರೋಪಿಸಲಾಗಿದೆ. ರೂಮ್‌ನಲ್ಲಿ ಆರೋಪಿಯು …

Read More »

ಉಡುಪಿ: ಅಪಾರ್ಟೆಂಟ್ ಗೆ ನುಗ್ಗಿ ಲ್ಯಾಪ್ ಟಾಪ್, ಐಪ್ಯಾಡ್ ಕಳ್ಳತನ- ಇಬ್ಬರು ಅರೆಸ್ಟ್

ಉಡುಪಿ:  ಮಣಿಪಾಲ ಠಾಣೆ ವ್ಯಾಪ್ತಿಯ ವಿದ್ಯಾರತ್ನನಗರದ ಅಪಾರ್ಟೆಂಟ್ ವೊಂದರಲ್ಲಿ ಎರಡು ಲ್ಯಾಪ್ ಟಾಪ್ ಮತ್ತು ಐಪಾಡ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪೆರುಮಾಳ್ ನಿವಾಸಿ ಪಿ ಕಾರ್ತಿಕ್ (28) ಹಾಗೂ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಬಾಲನ್ (34) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 4,00,000 ರೂ. ಮೌಲ್ಯದ ಎರಡು ಲ್ಯಾಪ್ ಟಾಪ್ ಮತ್ತು 1 ಆಪಲ್ ಕಂಪನಿಯ ಐಪಾಡ್ ನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರು ಮಣಿಪಾಲದ ಅಪಾರ್ಟ್ ಮೆಂಟ್ ಗಳಲ್ಲಿ …

Read More »

ಉಡುಪಿ: ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ಜೋಡಣೆ ಮಾಡಿಸಿಕೊಳ್ಳಬೇಕು – ಜಿಲ್ಲಾಧಿಕಾರಿ

ಉಡುಪಿ: ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್‌ ಜೋಡಣೆ ಮಾಡಿಸಿಕೊಳ್ಳಬಹುದು. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಅವರಿಂದ ಮಾಹಿತಿ ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್‌ ಜೋಡಣೆ …

Read More »

ಕಾಪು ಬೀಚ್ ನಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ಸ್ಥಳೀಯ ಮೀನುಗಾರರು

ಕಾಪು : ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯ ಮಿನುಗಾರರು ರಕ್ಷಿಸಿದ ಘಟನೆ ಇಂದು ಕಾಪು ಬೀಚ್ ನಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್ (31) ಸ್ಥಳೀಯ ಮೀನುಗಾರರಿಂದ ರಕ್ಚಿಸಲ್ಪಟ್ಟ ಯುವಕ. ರವಿವಾರ ರಜಾ ದಿನವಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗಾಗಿ ಬಲೆ ಇಡಲೆಂದು ಬಲೆಯೊಂದಿಗೆ ತೆರಳಿದ್ದ ಸಚಿನ್ ಅವರು ಸಮುದ್ರದಲ್ಲಿ ಮುಳುಗಿ, ಸಮುದ್ರ ಪಾಲಾಗುವ ಭೀತಿ ಎದುರಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಬೊಬ್ಬೆ ಹಾಕಿದ್ದು, ಮೀನುಗಾರಿಕಾ ವೃತ್ತಿನಿರತರಾದ ಶರ್ಮಾ, ಹರೀಶ್ ಕರ್ಕೇರ ಅವರು ಸಮುದ್ರಕ್ಕೆ ಇಳಿದು …

Read More »

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ- ಸೆಪ್ಟೆಂಬರ್ 15ಕ್ಕೆ ಬೃಹತ್‌ ಮಾನವ ಸರಪಳಿ- ಡಿಸಿ ವಿದ್ಯಾಕುಮಾರಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನ ಸಾಮಾನ್ಯರ ನಡುವೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟೆಂಬರ್ 15ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ಶನಿವಾರ ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವ ಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಸಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ …

Read More »

ಉಡುಪಿ: ಪಡುಕೆರೆ ಬೀಚ್​ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌- ಪೊಲೀಸರ ಅಡ್ಡಿಗೆ ಯುವತಿಯ ಆಕ್ಷೇಪ

ಉಡುಪಿ : ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬರು ಬಿಕಿನಿ ಫೋಟೋಶೂಟ್ ಮಾಡಿಸಿಕೊಳ್ಳುವ ವೇಳೆ ಪೊಲೀಸರು ತಡೆದ ಘಟನೆ ನಡೆದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಯುವತಿ, ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಎಚ್ಚರಿಕೆ ನೀಡುವಂತೆಯೂ ತಿಳಿಸಿದ್ದರು ಎನ್ನಲಾಗಿದೆ. ಸಂಭಾವ್ಯ ಸಮಸ್ಯೆಯ ಬಗ್ಗೆ ಅರಿತುಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಬಟ್ಟೆ ಬದಲಾಯಿಸುವಂತೆ ಸೂಚಿಸಿದ್ದರು. ಈ ವಿಚಾರವಾಗಿ …

Read More »

ಉಡುಪಿ: ಮಹಿಳೆ ಮೃತ್ಯು , ಸಾವಿನಲ್ಲಿ ಸಂಶಯ-ಠಾಣೆಯಲ್ಲಿ ಮಗಳು ದೂರು

ಉಡುಪಿ: ಮಹಿಳೆಯೊಬ್ಬರ ಸಂಶಯಾಸ್ಪದ ಸಾವಿನ ಕುರಿತು ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ತಾಯಿ ಸುಮತಿ (66) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆಂದು ಮೃತರ ಮಗಳು ದೂರಿನಲ್ಲಿ ತಿಳಿಸಿದ್ದಾರೆ‌.   ಮೃತರಿಗೆ 5 ಜನ ಮಕ್ಕಳಿದ್ದು ಅವರ ಗಂಡ 3 ವರ್ಷದ ಹಿಂದೆ ಮರಣ ಹೊಂದಿದ ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಮಕ್ಕಳು ಆಗಾಗ್ಗೆ ಬಂದು ಹೋಗುತಿದ್ದರು. ಆ.26ರಂದು ಮಗಳು ವಿಜಯ್ ಅವರು ಸುಮತಿ ರವರನ್ನು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದು ಪ್ರತಿ ನಿತ್ಯದಂತೆ ಆಗಸ್ಟ್ 27 ರಂದು ರಾತ್ರಿ 10:30 ಗಂಟೆಗೆ ತಾಯಿಗೆ ಕರೆ …

Read More »

You cannot copy content of this page.