ಉಡುಪಿ

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

ಉಡುಪಿ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105 ಲಕ್ಷಕ್ಕೆ ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ ರೂ.672.ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು …

Read More »

ಉಡುಪಿ: ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್ಸಿನ ಟಯರ್..!

ಉಡುಪಿ: ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಟಯರ್ ಕಳಚಿದ್ದು, ಸಂಭವನೀಯ ಅನಾಹುತ ತಪ್ಪಿದ ಘಟನೆ ಕುಂದಾಪುರ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ಶನಿವಾರ ನಡೆದಿದೆ. ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಇದಾಗಿದೆ. ಬಸ್ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿoದ ಯಾವುದೇ ಅನಾಹುತ ಸಂಭವಿಸದೆ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಆಜ್ರಿಯ ನಿವಾಸಿ ಚಂದ್ರಹಾಸ ಅವರು ಪ್ರತಿಕ್ರಿಯೆ ನೀಡಿದ್ದು, ಕೆಎಸ್‌ಆರ್‌ಟಿಸಿ ಹಾಗೂ ಡಿಪೋ ಮೆಕ್ಯಾನಿಕ್‌ಗಳ ನಿರ್ಲಕ್ಷö್ಯದಿಂದ ಈ ಘಟನೆ ಸಂಭವಿಸಿದೆ. ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Read More »

ಮಣಿಪಾಲ: ಅಪ್ಲಾಸ್ಟಿಕ್ ಅನೀಮಿಯಾದಿಂದ ಬಳಲುತ್ತಿದ್ದ 15 ವರ್ಷದ ಬಾಲಕನ ಚಿಕಿತ್ಸೆಗೆ 20 ಲಕ್ಷ ಸಂಗ್ರಹಿಸಿ ನೆರವಾದ ಹೋಮ್ ಡಾಕ್ಟರ್ ಫೌಂಡೇಶನ್

ಮಣಿಪಾಲ:ಅಪ್ಲಾಸ್ಟಿಕ್ ಅನೀಮಿಯಾ ದಿಂದ ಬಳಲುತ್ತಿರುವ 15 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿಯೊಂದೆ ಪರಿಹಾರ ವಾಗಿತ್ತು. ಇದಕ್ಕೆ ಸುಮಾರು 20 ರಿಂದ 20 ಲಕ್ಷ ಖರ್ಚು ಹಾಗಬಹುದೆಂದು ಚಿಕಿತ್ಸೆ ನೀಡುತ್ತಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯರು ತಿಳಿಸಿದ್ದರು. ಬಡವರಾಗಿದ್ದ ಕುಟುಂಬಸ್ಥರಿಗೆ ಇದನ್ನು ಭರಿಸುವುದು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ನೇತೃತ್ವವಹಿಸಿದ್ದ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಜಿ ವಿಭಾಗದ ಮುಖ್ಯಸ್ಥರಾದ ಡಾ ವಾಸುದೇವ್ ಭಟ್ ತಂಡದವರು ಹೋಂ ಡಾಕ್ಟರ್ ಫೌಂಡೇಶನ್ ನ ನೇತೃತ್ವ ವಹಿಸಿರುವ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ …

Read More »

ಕುಂದಾಪುರ: ಮನೆ ಮೇಲೆ ಬಿದ್ದ ಬೃಹತ್‌ ಮರ..!

ಕುಂದಾಪುರ: ಭಾರೀ ಗಾಳಿಗೆ ಮನೆಯೊಂದರ ಮೇಲೆ ಬೃಹತ್ ಅಶ್ವಥ ಮರ ಬುಡ ಸಹಿತ ಬಿದ್ದ ಘಟನೆ ಕುಂದಾಪುರ ಹಡವು ಗ್ರಾಮದಲ್ಲಿ ನಡೆದಿದೆ. ಹಡವು ಗ್ರಾಮದ ಚಿಕ್ಕು ದೇವಾಡಿಗ ಎಂಬವರ ಮನೆಯ ಮೇಲೆ ಮರ ಬೀಳುವ ಶಬ್ದ ಕೇಳಿ ಮನೆಯವಲ್ಲಿದ್ದವರೆಲ್ಲರೂ ಹೊರಗೆ ಓಡಿ ಬಂದರು. ಇದರಿಂದ ಅವರೆಲ್ಲ ಅಪಾಯದಿಂದ ಪಾರಾಗಿದ್ದಾರೆ. ಪರಿಣಾಮ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

Read More »

ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ಮೃತದೇಹ ಪತ್ತೆ..!

ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ  ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ …

Read More »

ಉಡುಪಿ: ಸಿಎ ಅಂತಿಮ ಪರೀಕ್ಷೆಯಲ್ಲಿ ರಾಧಿಕಾ ಆರ್ ಉಪಾಧ್ಯ ಉತ್ತೀರ್ಣ

ಉಡುಪಿ ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಭಾರತೀಶ & ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುವ ಅವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ.

Read More »

ಉಡುಪಿ: ಪಾರ್ಟ್‌ಟೈಮ್ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಪಾರ್ಟ್‌ ಟೈಮ್ ಜಾಬ್ ಹೆಸರಿನಲ್ಲಿ ಟಾಸ್ಕ್ ನೀಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶ್ಚಿತಾ(25) ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಪಾರ್ಟ್‌ ಟೈಮ್ ಜಾಬ್ ಬಗ್ಗೆ ಜಾಹೀರಾತು ಬಂದಿದ್ದು ಅದನ್ನು ನಂಬಿ ಲಿಂಕ್‌ನ್ನು ಕ್ಲಿಕ್ ಮಾಡಿ ನೊಂದಣಿ ಮಾಡಿಕೊಂಡಿದ್ದರು. ನಂತರ ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆಲವೊಂದು ಟಾಸ್ಕ್ ಗಳನ್ನು ನೀಡಿ, ಹೆಚ್ಚು ಹಣ ಪಡೆಯುವ ಬಗ್ಗೆ ನಂಬಿಸಿದ್ದರು. ಅದರಂತೆ ಅವರು ಜು.11ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 2,06,507 …

Read More »

ಉಡುಪಿ: ದಂಪತಿ ಜಗಳ ಠಾಣೆಯಲ್ಲಿ ಇತ್ಯರ್ಥ – ವಾಪಾಸ್ ಬರುವಾಗ ಪತಿ ಹೊಳೆಗೆ ಹಾರಿ ಆತ್ಮಹತ್ಯೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆ ಕಾಳಾವರ ಜನತಾ ಕಾಲೋನಿ ನಿವಾಸಿ ಹರೀಶ್ ಎಂದು ತಿಳಿದು ಬಂದಿದೆ. ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇಬ್ಬರ ಮನಸ್ತಾಪವನ್ನು ಅಲ್ಲೇ ಸರಿಪಡಿಸಿದ್ದಾರೆ‌ ಠಾಣೆಯಿಂದ ಆಟೋದಲ್ಲಿ ಬರುವಾಗ ಹೊಳೆ ಹತ್ತಿರ ನಿಲ್ಲಿಸಿ ಬ್ರಿಜ್ ಮೇಲಿಂದ ನದಿಗೆ ಹಾರಿದ್ದಾರೆ ಎಂದು ತಿಳಿಯಲಾಗಿದೆ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕಂಡ್ಲೂರು ನದಿಯಲ್ಲಿ ಹರೀಶ್ ಅವರ ಶವ ಹುಡುಕಾಟದಲ್ಲಿದ್ದಾರೆ.

Read More »

‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಅಲ್ಲದೆ ರೋಗಿಗಳ ಮನಸ್ಥಿತಿಗೆ ಅನುಗುಣವಾಗಿ ವಿವಿಧ ರೀತಿಯ ಆರೋಗ್ಯಕ್ಕೆ, …

Read More »

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ- ಸವಾರ ಗಂಭೀರ

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬ್ಯೆಲಿನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ. ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ನ ಹಿಂಭಾಗ ಜಖಂಗೊಂಡಿದೆ.

Read More »

You cannot copy content of this page.