April 20, 2025
WhatsApp Image 2025-04-01 at 3.22.54 PM

ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ತಕ್ಷಣ ಆತನನ್ನು ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಯ ಬಳಿಕ ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>