

ಮುಲ್ಕಿ:ಬಸ್ ಢಿಕ್ಕಿ ಹೊಡೆದು ಶಾಲಾ ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ನಡೆದಿದೆ.
ಉಲ್ಲಂಜೆ ನಿವಾಸಿ ಚರಣ್ (15) ಮೃತ ಬಾಲಕ.ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ.ಸಂಜೆ ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಹೋಗುವಾಗ ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಈ ಕುರಿತು ಬಜ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.